ಮೈಸೂರು: ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ 10 ಮಂದಿ ಸಾವು

ಮೈಸೂರು: ಮೈಸೂರಿನ ಟಿ ನರಸಿಪುರ ಸಮೀಪ ಖಾಸಗಿ ಬಸ್‌ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಹತ್ತು ಜನರು ಹತ್ತು ಮಂದಿ ಮೃತಪಟ್ಟ ಘಟನೆ ವರದಿಯಾಗಿದ್ದು, ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ.
ಇನ್ನೋವಾ ಕಾರಿನಲ್ಲಿ ಒಂದೇ ಕುಟುಂಬದ ಪ್ರಯಾಣಿಕರು ಮೈಸೂರು ಪ್ರವಾಸಕ್ಕೆ ಆಗಮಿಸಿದ್ದರು. ಟಿ ನರಸಿಪುರ ಸಮೀಪದಕುರುಬೂರು ಗ್ರಾಮದ ಪಿಂಜರ ಪೋಳ ಎಂಬಲ್ಲಿ ಇವರಿದ್ದ ಇನ್ನೋವಾ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ.
ಅಪಘಾತದ ಭೀಕರತೆಗೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದ ಆರು ಮಂದಿ ಕೂಡ ಆಸ್ಪತ್ರೆ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಹತ್ತುಮಂದಿ ಸಾವಿಗೀಡಾಗಿದ್ದಾರೆ. ಕಾರಿನಲ್ಲಿದ್ದ 4 ಗಂಡಸರು, 3 ಮಹಿಳೆಯರು 3 ಮಕ್ಕಳು ಸೇರಿ 10 ಮಂದಿ ಸೇರಿ ಒಟ್ಟು 10 ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್‌ನಲ್ಲಿದ್ದ ಇತರೆ ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಬಳ್ಳಾರಿ ಜಿಲ್ಲೆಯ ಸಂಗನಕಲ್ಲು ಗ್ರಾಮದ ಮಂಜುನಾಥ (25), ಪೂರ್ಣಿಮಾ (30), ಕಾರ್ತಿಕ (8), ಪವನ(7), ಗಾಯತ್ರಿ (28), ಶ್ರಾವ್ಯ (5), ಕೊಟ್ರೇಶ(45), ಸುಜಾತ(40), ಸಂದೀಪ (23) ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಶಶಿಕುಮಾರ (30), ಜನಾರ್ದನ (32), ಪುನೀತ (7)  ಎಂದು ಗುರುತಿಸಲಾಗಿದೆ. ಬಸ್ಸಿನಲ್ಲಿದ್ದ 16 ಜನರು ಗಾಯಗೊಂಡಿದ್ದು, ಅವರಿಗೆ ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಇಬ್ಬರನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಲಾಗಿದೆ.
ಟಿ.ನರಸೀಪುರ ಮುಖ್ಯ ರಸ್ತೆಯ ಮಾರ್ಗವಾಗಿ ತೆರಳುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ಆಗಮಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಬಂಧ ಟಿ.ನರಸೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   'ಅನುಮಾನ ಆಧರಿಸಿ ಇವಿಎಂ ವಿರುದ್ಧ ನಿರ್ದೇಶನ ನೀಡಲು ಸಾಧ್ಯವೇ? : ಸುಪ್ರೀಂ ಕೋರ್ಟ್ ಪ್ರಶ್ನೆ

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement