ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗದಲ್ಲಿ ಜೂನ್ 1ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇಂದು (ಮೇ 29, ಸೋಮವಾರ) ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ನಾಳೆ (ಮೇ 30, ಮಂಗಳವಾರ) ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದದ್ದು, ಗುಡುಗು ಸಹಿತ ಮಳೆಯಾಗುಗವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕೆಲವೆಡೆ ಉಷ್ಣಾಂಶದಲ್ಲಿ ಬದಲಾವಣೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಅಂದರೆ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ಹೆಚ್ಚಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಸಾಮಾನ್ಯವಾಗಿದೆ. ರಾಯಚೂರಿನಲ್ಲಿ ಗರಿಷ್ಠ 40.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement