
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ (DK Shivakumar) ಒಳಗೊಂಡು 34 ಮಂದಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ, ರಾಜ್ಯಪಾಲರ ಅಂಕಿತದ ಬಳಿಕ ಪ್ರಕಟವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಣಕಾಸು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಬೃಹತ್ ಮತ್ತು ಮಧ್ಯಮ ನೀರಾವರಿ, ಬೆಂಗಳೂರು ನಗರ ಅಭಿವೃದ್ಧಿ, ಎಚ್.ಕೆ.ಪಾಟೀಲ್ ಅವರಿಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಪ್ರವಾಸೋದ್ಯಮ ಖಾತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೃಷ್ಣ ಬೈರೇಗೌಡ ಅವರಿಗೆ ಕಂದಾಯ ಖಾತೆ, ದಿನೇಶ್ ಗುಂಡೂರಾವ್ ಅವರಿಗೆ ನೀಡಲಾಗಿದೆ.
ಯಾರಿಗೆ ಯಾವ ಖಾತೆ ಎನ್ನುವುದು ಈ ಕೆಳಗಿನಂತಿದೆ.
ಸಚಿವರ ಖಾತೆ ಹಂಚಿಕೆ ಅಧಿಕೃತ ಪಟ್ಟಿ ಇಲ್ಲಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯ- ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ- ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ
ಡಾ. ಜಿ.ಪರಮೇಶ್ವರ- ಗೃಹ
ಎಚ್ ಕೆ ಪಾಟೀಲ್- ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ
ಕೆ.ಹೆಚ್.ಮುನಿಯಪ್ಪ- ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರ
ರಾಮಲಿಂಗರೆಡ್ಡಿ- ಸಾರಿಗೆ , ಮುಜರಾಯಿ
ಎಂ.ಬಿ.ಪಾಟೀಲ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ
ಕೆ.ಜೆ.ಜಾರ್ಜ್- ಇಂಧನ
ದಿನೇಶ ಗುಂಡೂರಾವ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಎಚ್ ಸಿ ಮಹದೇವಪ್ಪ: ಸಮಾಜಕಲ್ಯಾಣ
ಸತೀಶ್ ಜಾರಕಿಹೊಳಿ- ಲೋಕೋಪಯೋಗಿ
ಕೃಷ್ಣ ಬೈರೇಗೌಡ- ಕಂದಾಯ
ಪ್ರಿಯಾಂಕ್ ಖರ್ಗೆ-ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
ಶಿವಾನಂದ ಪಾಟೀಲ-ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ
ಜಮೀರ್ ಅಹಮದ್ ಖಾನ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು
ಶರಣುಬಸಪ್ಪ ದರ್ಶನಾಪುರ- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು
ಈಶ್ವರ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ
ಚಲುವರಾಯಸ್ವಾಮಿ- ಕೃಷಿ
ಎಸ್.ಎಸ್.ಮಲ್ಲಿಕಾರ್ಜುನ- ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ
ರಹೀಂ ಖಾನ್: ಪೌರಾಡಳಿತ, ಹಜ್ ಖಾತೆ
ಸಂತೋಷ ಲಾಡ್- ಕಾರ್ಮಿಕ
ಡಾ.ಶರಣುಪ್ರಕಾಶ ಪಾಟೀಲ-ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ
ಆರ್.ಬಿ.ತಿಮ್ಮಾಪುರ- ಅಬಕಾರಿ
ಕೆ.ವೆಂಕಟೇಶ- ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ
ಶಿವರಾಜ ತಂಗಡಗಿ- ಹಿಂದುಳಿದ ವರ್ಗ , ಕನ್ನಡ ಮತ್ತು ಸಂಸ್ಕೃತಿ
ಡಿ.ಸುಧಾಕರ: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ
ಬಿ.ನಾಗೇಂದ್ರ: ಯುವಜನ ಸೇವೆ ಮತ್ತು ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ
ಕೆ.ಎನ್.ರಾಜಣ್ಣ: ಸಹಕಾರ
ಬೈರತಿ ಸುರೇಶ- ನಗರಾಭಿವೃದ್ಧಿ, ಪಟ್ಟಣ ಯೋಜನೆ (ಬೆಂಗಳೂರು ಹೊರತು ಪಡಿಸಿ)
ಲಕ್ಷ್ಮಿ ಹೆಬ್ಬಾಳ್ಕರ- ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ
ಮಂಕಾಳು ವೈದ್ಯ- ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ
ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
ಡಾ.ಎಂ.ಸಿ.ಸುಧಾಕರ- ಉನ್ನತ ಶಿಕ್ಷಣ
ಎನ್.ಎಸ್.ಬೋಸರಾಜ: ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ



ನಿಮ್ಮ ಕಾಮೆಂಟ್ ಬರೆಯಿರಿ