ಶ್ರೀನಗರ: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಜ್ಜರ್ ಕೋಟ್ಲಿ ಬಳಿ ಮಂಗಳವಾರ ಬಸ್ ಕಮರಿಗೆ ಬಿದ್ದ ಪರಿಣಾಮ 10 ಮಂದಿ ಸಾವಿಗೀಡಾಗಿದ್ದು, 20 ಮಂದಿ ಗಾಯಗೊಂಡಿದ್ದಾರೆ.
ಅಪಘಾತದ ಸಮಯದಲ್ಲಿ 75 ಪ್ರಯಾಣಿಕರನ್ನು ಹೊತ್ತ ಬಸ್ ಅಮೃತಸರದಿಂದ ಕತ್ರಾಕ್ಕೆ ತೆರಳುವವರಾಗಿದ್ದರು. ಅವರೆಲ್ಲ ಮಾತಾ ವೈಶ್ನವೋದೇವಿ ಮಂದಿರಕ್ಕೆ ತೆರಳುತ್ತಿದ್ದರು. ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಜಮ್ಮುವಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಜೆ ಸಂತ್ರಸ್ತರು ಮಾನಸ ಮಾತಾ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದು ದೇವಸ್ಥಾನದಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿ ನಡೆದಿದೆ
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ