ಬೆಳಗಾವಿ: ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವರಿ ಅವರನ್ನು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ತಡರಾತ್ರಿ ಭೇಟಿ ಮಾಡಿದ್ದಾರೆ
ಬೆಳಗಾವಿಯ ಸದಾಶಿವನಗರದಲ್ಲಿರುವ ಲಕ್ಷ್ಮಣ ಸವದಿ ನಿವಾಸಕ್ಕೆ ತೆರಳಿದ ಶಿವಕುಮಾರ ಅವರು ಮಾತುಕತೆ ನಡೆಸಿದರು. ಸಚಿವ ಸ್ಥಾನ ಸಿಗದಿದ್ದಕ್ಕೆ ಸವದಿ ಅಸಮಾಧಾನಗೊಂಡಿದ್ದಾರೆ ಎಂಬ ಮಾತುಗಳ ನಡುವೆ ರಾತ್ರೋರಾತ್ರಿ ಸವದಿ ನಿವಾಸಕ್ಕೆ ಆಗಮಿಸಿದ ಶಿವಕುಮಾರ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಸವದಿ ಭೇಟಿ ವೇಳೆ ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಬಾಬಾಸಾಹೇಬ್ ಪಾಟೀಲ, ಆಸೀಫ್ ಸೇಠ್, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮೊದಲಾದವರಿದ್ದರು ಎಂದು ಹೇಳಲಾಗಿದೆ. ಈ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ