ಬೆಂಗಳೂರು : ಕೆ ಎಸ್ ಆರ್ ಟಿ ಸಿಯು ರಾಜ್ಯದ ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿಯನ್ನು ಜೂನ್ 15ರ ವರೆಗೆ ವಿಸ್ತರಣೆ ಮಾಡಿದೆ.
ಈ ಬಗ್ಗೆ ಕೆಎಸ್ ಆರ್ ಟಿಸಿ ಪ್ರಕಟಣೆ ಹೊರಡಿಸಿದ್ದು, 2023-24ನೇ ಸಾಲಿನ ವಿದ್ಯಾರ್ಥಿಗಳ ಉಚಿತ / ರಿಯಾಯಿತಿ ಬಸ್ ಪಾಸುಗಳನ್ನು ಇಡಿಸಿಎಸ್ ಇಲಾಖೆಯ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ ಯಾಂತ್ರೀಕೃತವಾಗಿ ವಿತರಣೆ ಮಾಡಲು ಕ್ರಮವಹಿಸಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ. ವಿದ್ಯಾರ್ಥಿಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಹಾಗೂ ಪಾಸ್ ಪಡೆಯಲು ಕಾಲಾವಕಾಶ ಬೇಕಿದೆ. ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ತರಗತಿಗಳಿಗೆ ಹಾಜರಾಗಲು ಯಾವುದೇ ಅನಾನುಕೂಲವಾಗದಂತೆ ಕ್ರಮ ಕೈಗೊಳ್ಳಬೇಕಿದೆ.
ಈ ಸಂಬಂಧ ವಿದ್ಯಾರ್ಥಿಗಳಿಗೆ ದಿನಾಂಕ 15.06.2023 ರವರೆಗೆ ಕೆಲ ದಾಖಲೆಗಳನ್ನು ನಿಗಮದ ಬಸ್ಸುಗಳಲ್ಲಿ ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಪ್ರಸಕ್ತ ವರ್ಷದಲ್ಲಿ ಶಾಲಾ / ಕಾಲೇಜುಗಳಿಗೆ ದಾಖಲಾಗಿರುವ ಸಂಬಂಧದ ಶುಲ್ಕ ಪಾವತಿ ರಸೀದಿ ಅಥವಾ. 2022-23ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ ವಿದ್ಯಾರ್ಥಿಗಳು ಪ್ರಯಾಣ ಮಾಡಬಹುದಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ