ಸಾವಿರಾರು ಸರ್ಕಾರಿ ನೌಕರರು, ಐಷಾರಾಮಿ ಕಾರುಗಳ ಮಾಲೀಕರ ಬಳಿಯೂ ಬಿಪಿಎಲ್‌ ಕಾರ್ಡ್‌ ಪತ್ತೆ…!

ಬೆಂಗಳೂರು: ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯು 4.6 ಲಕ್ಷ ನಕಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಂದ 13.5 ಕೋಟಿ ರೂಪಾಯಿ ದಂಡ ಸಂಗ್ರಹಿಸಿದೆ.
ಅಚ್ಚರಿಯ ಸಂಗತಿಯೆಂದರೆ, ರಾಜ್ಯದ 21,232 ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದು, ಅವರಿಗೆ 11.2 ಕೋಟಿ ರೂ. ದಂಡ ವಿಧಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಅಕ್ರಮವಾಗಿ ಬಿಪಿಎಲ್‌ ಕಾರ್ಡ್‌ ಹೊಂದ್ದಿದ್ದವರನ್ನು ಪತ್ತೆಹಚ್ಚುವ ಅಭಿಯಾನವು ಫೆಬ್ರವರಿ 2021 ರಿಂದ ಆರಂಭವಾಗಿದೆ. ಆಧಾರ್ ಸಂಖ್ಯೆ ಬಳಸಿಕೊಂಡು ವಿವಿಧ ಇಲಾಖೆಗಳಿಂದ ಅಂತಹ ಅನರ್ಹ ಫಲಾನುಭವಿಗಳ ಅಂಕಿಅಂಶಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಇಲಾಖೆಯ ಹೆಚ್ಚುವರಿ ನಿರ್ದೇಶಕ (ವಿಜಿಲೆನ್ಸ್ ಮತ್ತು ಸಾರ್ವಜನಿಕ ವಿತರಣೆ) ಜ್ಞಾನೇಂದ್ರ ಕುಮಾರ ಗಂಗ್ವಾರ್ ಹೇಳಿದ್ದಾರೆ.
“ನಾವು ಸಾರಿಗೆ ಇಲಾಖೆಯ ನೆರವನ್ನೂ ಪಡೆದಿದ್ದೇವೆ. 12,583 ಬಿಪಿಎಲ್ ಫಲಾನುಭವಿಗಳು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. ಮೂರು ಹೆಕ್ಟೇರ್‌ಗಿಂತ ಹೆಚ್ಚು ಕೃಷಿ ಭೂಮಿ ಹೊಂದಿರುವ 2.9 ಲಕ್ಷ ರೈತರು ಸಹ ಬಿಪಿಎಲ್ ಕಾರ್ಡ್‌ಗಳನ್ನು ಪಡೆದಿದ್ದಾರೆ ಎಂಬುದು ಪತ್ತೆಯಾಗಿದೆ” ಎಂದು ಅವರು ತಿಳಿಸಿದ್ದಾರೆ. “ಆದಾಯ ತೆರಿಗೆ ಇಲಾಖೆಯ ನೆರವಿನಿಂದ ವಾರ್ಷಿಕ 1.2 ಲಕ್ಷ ರೂ.ಗಳಿಗಿಂತ ಹೆಚ್ಚು ಆದಾಯ ಹೊಂದಿರುವ 50,000 ಜನರನ್ನು ಪತ್ತೆಹಚ್ಚಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಸಾರಿಗೆ ಸಂಸ್ಥೆ ಬಸ್‌ ಟಿಕೆಟ್‌ ದರ ಹೆಚ್ಚಳ ? : ಸಿಎಂ ಡಿಕೆ ಶಿವಕುಮಾರ ಹೇಳಿದ್ದೇನು ?

ಸರ್ಕಾರಿ ನೌಕರರಿಗೆ ಭಾರೀ ಪ್ರಮಾಣದ ದಂಡ!
ಸರ್ಕಾರಿ ನೌಕರರಿಗೆ ಭಾರೀ ಪ್ರಮಾಣದ ದಂಡ ವಿಧಿಸಲಾಗಿದೆ. ಇದು ಈ ತರಹದ ಮೊದಲ ಘಟನೆಯಾಗಿರುವುದರಿಂದ ಕಾನೂನು ಕ್ರಮಗಳನ್ನು ಕೈಗೊಂಡಿಲ್ಲ. 21,232 ನೌಕರರಲ್ಲಿ 17,521 ಮಂದಿ ತಮ್ಮ ರೇಷನ್‌ ಕಾರ್ಡ್‌ಗಳನ್ನು ಎಪಿಎಲ್‌ ಕಾರ್ಡ್‌ಗಳನ್ನಾಗಿ ಬದಲಾಯಿಸಿಕೊಂಡಿದ್ದಾರೆ. ಆರ್ಥಿಕ ಪರಿಸ್ಥಿತಿಗಳನ್ನು ಗಮನವಿಟ್ಟುಕೊಂಡು ದಂಡ ವಿಧಿಸಲಾಗಿದೆ. ಆದರೆ, ಸರ್ಕಾರಿ ನೌಕರರಿಗೆ ಭಾರೀ ದಂಡ ವಿಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಆಯುಕ್ತ (ಪ್ರಭಾರ) ಮತ್ತು ವಿಜಿಲೆನ್ಸ್ ಮತ್ತು ಐಟಿ ಹೆಚ್ಚುವರಿ ನಿರ್ದೇಶಕರು ಮಾತನಾಡಿ, ರಾಜ್ಯ ಸರ್ಕಾರದ ಮಾರ್ಗಸೂಚಿಗಳು ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಕುಟುಂಬಗಳು, ಸರ್ಕಾರಿ ನೌಕರರು, ಇತರ ಆದಾಯ ತೆರಿಗೆ ಪಾವತಿದಾರರು, ಕೆಲಸ ಮಾಡುವ ಕುಟುಂಬದ ಯಾವುದೇ ಸದಸ್ಯರಾಗಿರಬಹುದು. ಸಾರ್ವಜನಿಕ ವಲಯದ ಸಂಸ್ಥೆಗಳು (ಪಿಎಸ್‌ಯು) ಅಥವಾ ಸರ್ಕಾರಿ-ನೆರವಿನ ಸ್ವಾಯತ್ತ ಸಂಸ್ಥೆಗಳು ಮತ್ತು ಸ್ಥಳೀಯ ಸಂಸ್ಥೆಗಳು, ಗ್ರಾಮೀಣ ಪ್ರದೇಶದಲ್ಲಿ ಮೂರು ಹೆಕ್ಟೇರ್‌ಗಿಂತ ಹೆಚ್ಚು ಭೂಮಿ ಹೊಂದಿರುವ ಕುಟುಂಬಗಳು ಮತ್ತು ರೂ 1.2 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿರುವ ಕುಟುಂಬಗಳು ಬಿಪಿಎಲ್ ಕಾರ್ಡ್‌ಗಳಿಗೆ ಅನರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆ ‘ಪ್ರಜಾಸೇವೆ ಇಲಾಖೆ’ ಸ್ಥಾಪನೆ : ಸಿಎಂ ಘೋಷಣೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement