ಸರ್ಕಾರದ ಯಾವುದೇ ಯೋಜನೆಗಳು ಪುಗಸಟ್ಟೆ ಸಿಗಲ್ಲ, ಮಾನದಂಡ ಇರಬೇಕಾಗುತ್ತದೆ : ಪ್ರಿಯಾಂಕ ಖರ್ಗೆ

ಬೆಂಗಳೂರು : ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ಉಚಿಯವಾಗಿ ಅನ್ವಯ ಎಂದು ನಾವು ಎಲ್ಲಿಯೂ ಹೇಳಿಲ್ಲ. ಸರ್ಕಾರದ ಯಾವುದೇ ಯೋಜನೆಯನ್ನು ಹಾಗೆಯೇ ಕೊಡುವುದಿಲ್ಲ. ಅದಕ್ಕೆ ಕೆಲವು ಮನದಂಡಗಳು ಇರಬೇಕಾಗುತ್ತದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಯಾರಿಗೆ ಸಿಗಬೇಕು ಹಾಗೂ ಯಾರಿಗೆ ಸಿಗಬಾರದು ಎಂಬ ಬಗ್ಗೆ ಮಾನದಂಡದ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೆಲವೊಂದು ನಿರ್ಬಂಧಗಳು ಅನಿವಾರ್ಯವಾಗಲಿದೆ. ಯೋಜನೆಗಳು ಕೇಂದ್ರ ಸರ್ಕಾರದ್ದೇ ಇರಲಿ, ರಾಜ್ಯ ಸರ್ಕಾರದ್ದೇ ಇರಲಿ, ಸರ್ಕಾರದ ಯಾವುದೇ ಯೋಜನೆಗಳು ಯಾವುದೇ ಮಾನದಂಡವಿಲ್ಲದೆ ನೀಡುವುದಿಲ್ಲ. ಕೆಲವೊಂದು ಮಾನದಂಡಗಳು ಅನಿವಾರ್ಯವಾಗುತ್ತದೆ ಎಂದು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳು ಕುರಿತು ಶುಕ್ರವಾರ ಕ್ಯಾಬಿನೆಟ್‌ ಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಲಿದೆ. ಚರ್ಚೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಆರ್ಥಿಕ ಇಲಾಖೆಯವರು ಯಾವ ರೀತಿಯಲ್ಲಿ ಘೋಷಣೆಗಳನ್ನು ಜಾರಿಗೊಳಿಸಬಹುದು ಎಂಬ ಬಗ್ಗೆ ಹೇಳಿದ್ದಾರೆ ಎಂದು ತಿಳಿಸಿದರು.
ಆರ್ಥಿಕ ಸ್ಥಿರತೆ ನೀಡಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸುವುದು ನಮ್ಮ ಸರ್ಕಾರದ ಉದ್ದೇಶ. ಗ್ಯಾರಂಟಿಗಳ ಜಾರಿಯಿಂದ ಆರ್ಥಿಕ ಹೊರೆ ಆಗುತ್ತದೆ. ಆದರೆ ಇದನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ, ಜನಸಾಮಾನ್ಯರಿಗೆ ಆರ್ಥಿಕ ಸ್ಥಿರತೆ ಕೊಡುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಕೇಸ್: ಎಸ್ಐಟಿ ತಂಡಕ್ಕೆ 18 ಸಿಬ್ಬಂದಿ ನೇಮಕ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement