ಸಿಎಂ ಸಿದ್ದರಾಮಯ್ಯ ಮುಖ್ಯ ಸಲಹೆಗಾರರಾಗಿ ಸುನೀಲ ಕನುಗೋಲು ನೇಮಕ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ (Congress) 135 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದಿದ್ದು, ಕಾಂಗ್ರೆಸ್‌ನ ಚುನಾವಣಾ ರಣತಂತ್ರಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಚುನಾವಣಾ ನೀತಿ ತಂತ್ರಜ್ಞ ಸುನೀಲ ಕನುಗೋಲು (Sunil Kanugolu) ಅವರಿಗೆ ರಾಜ್ಯ ಸರ್ಕಾರದಲ್ಲಿ ಉನ್ನತ ಹುದ್ದೆ ನೀಡಲಾಗಿದೆ.
ಸುನೀಲ ಕನುಗೋಲು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖ್ಯ ಸಲಹೆಗಾರರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಅವರಿಗೆ ಸಂಪುಟದ ದರ್ಜೆಯ ಸಚಿವ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ (ಮೇ 31) ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪೇಸಿಎಂ ಅಭಿಯಾನ ಕೈಗೊಂಡಿದ್ದರು. ಪೇ ಸಿಎಂ ಅಭಿಯಾನ, ಭಾರತ ಜೋಡೋ ಯಾತ್ರೆ ಯೋಜಿಸಿದ ಕೀರ್ತಿ ಸುನಿಲ್ ಕನುಗೋಲು ಅವರಿಗೆ ಸಲ್ಲುತ್ತದೆ. ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳನ್ನು ಹೊರತುಪಡಿಸಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ, ಪ್ರಚಾರಕ್ಕೆ ಸಂಬಂಧಿಸಿದಂತೆ ಯೋಜನೆಗಳನ್ನು ರೂಪಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement