“ಜೂನ್ 9 ರೊಳಗೆ ಕುಸ್ತಿ ಸಂಸ್ಥೆ ಮುಖ್ಯಸ್ಥರನ್ನು ಬಂಧಿಸಿ ಅಥವಾ…”: ಕೇಂದ್ರ ಸರ್ಕಾರಕ್ಕೆ ರೈತ ಮುಖಂಡರಿಂದ ಎಚ್ಚರಿಕೆ

ನವದೆಹಲಿ: ಭಾರತದ ಕುಸ್ತಿ ಸಂಸ್ಥೆಯ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟದಲ್ಲಿ ಭಾರತದ ಪ್ರಮುಖ ಕ್ರೀಡಾಪಟುಗಳನ್ನು ಬೆಂಬಲಿಸುತ್ತಿರುವ ರೈತ ಮುಖಂಡರು ಅವರನ್ನು ಬಂಧಿಸಿ ಅಥವಾ ದೊಡ್ಡ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ ಎಂದು ಕೇಂದ್ರಕ್ಕೆ ಹೊಸ ಗಡುವು ನೀಡಿದ್ದಾರೆ. . “ಕುಸ್ತಿಪಟುಗಳ ಕುಂದುಕೊರತೆಗಳನ್ನು ಸರ್ಕಾರ ಪರಿಹರಿಸಬೇಕು ಮತ್ತು ಅವರನ್ನು (ಬ್ರಿಜ್ ಭೂಷಣ್ ಶರಣ್ ಸಿಂಗ್) ಬಂಧಿಸಬೇಕು … Continued

ಒಡಿಶಾ ರೈಲು ಅಪಘಾತ: 50 ಮಂದಿ ಸಾವು, 350 ಜನರಿಗೆ ಗಾಯ

ಬಾಲಸೋರ್ : ವರದಿಗಳ ಪ್ರಕಾರ, ಶುಕ್ರವಾರ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಪ್ರಯಾಣಿಕರ ರೈಲು ಹಳಿತಪ್ಪಿದ ನಂತರ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಒಳಗೊಂಡ ಭೀಕರ ಟ್ರಿಪಲ್ ರೈಲು ಅಪಘಾತದಲ್ಲಿ ಕನಿಷ್ಠ 50 ಜನರು ಮೃತಪಟ್ಟಿದ್ದಾರೆ ಮತ್ತು 350 ಜನರು ಗಾಯಗೊಂಡಿದ್ದಾರೆ. ಶುಕ್ರವಾರ ಸಂಜೆ 6:51 ಕ್ಕೆ ಶಾಲಿಮಾರ್-ಚೆನ್ನೈ … Continued

ಗಂಗಾಧರ ಕೊಳಗಿ ‘ಮಿಸ್ಡ್ ಕಾಲ್ ‘ ಕಥಾ ಸಂಕಲನಕ್ಕೆ ವನರಾಗ ಶರ್ಮ ಪುಸ್ತಕ ಪ್ರಶಸ್ತಿ

ಸಿದ್ದಾಪುರ: ಹಿರಿಯ ಸಾಹಿತಿ ವನರಾಗ ಶರ್ಮ ಅವರ ಹೆಸರಿನಲ್ಲಿ ಅವರ ಮಕ್ಕಳು ರೂಪಿಸಿದ ಸ್ವರ್ಣಿಮ ಭಾರತಿ ಸಾಹಿತ್ಯ ಸಮ್ಮಾನ್ ವನರಾಗ ಶರ್ಮ ಪುಸ್ತಕ ಪ್ರಶಸ್ತಿ (2022) ಅನ್ನು ಪ್ರಕಟಿಸಲಾಗಿದೆ. ಪತ್ರಕರ್ತ ಹಾಗೂ ಬರಹಗಾರ ಸಿದ್ದಾಪುರದ ಗಂಗಾಧರ ಕೊಳಗಿ ಅವರ ‘ ಮಿಸ್ಡ್ ಕಾಲ್ ‘ ಕಥಾ ಸಂಕಲನಕ್ಕೆ ಈ ಪ್ರಶಸ್ತಿ ನೀಡಲಾಗಿದೆ. ನಿರ್ಣಾಯಕರಾಗಿದ್ದ ಸಾಹಿತಿಗಳಾದ ಭಾಗೀರಥಿ … Continued

ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಿಬ್ಬಂದಿ

ಮಂಗಳೂರು: ನೌಕರನೊಬ್ಬ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ಇಲ್ಲಿನ ಮುಡಾ ಕಚೇರಿ ಉರ್ವದ ಸ್ಟೋರ್ ರೂಂನಲ್ಲಿ ಜೂನ್ 2 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ಪಡೀಲ ಮೂಲದ ಕೀರ್ತನ್ (30) ಎಂದು ಗುರುತಿಸಲಾಗಿದೆ. ಅವರು ಮಂಗಳೂರು … Continued

ಕೋರಮಂಡಲ್ ಎಕ್ಸ್‌ಪ್ರೆಸ್-ಗೂಡ್ಸ್ ರೈಲಿನ ನಡುವೆ ಡಿಕ್ಕಿ: 179 ಮಂದಿಗೆ ಗಾಯ

ಬಾಲಸೋರ್: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಗೂಡ್ಸ್​ ರೈಲಿಗೆ 12841 ಯುಪಿ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಶುಕ್ರವಾರ (ಜೂನ್​ 2) ಸಂಜೆ ಡಿಕ್ಕಿಯಾಗಿದೆ. ಕೋರಮಂಡಲ್ ಎಕ್ಸ್‌ಪ್ರೆಸ್ ರೈಲಿನ ಎಂಟು ಬೋಗಿಗಳು ಹಳಿತಪ್ಪಿದ್ದು, ಕನಿಷ್ಠ 179 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸೂಪರ್‌ಫಾಸ್ಟ್ … Continued

ಶಿಕ್ಷಣ ಇಲಾಖೆಯಿಂದ ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿ ಪ್ರಕಟ: ಜೂನ್‌ 6ರಿಂದ ಶಿಕ್ಷಕರ ವರ್ಗಾವಣೆ ಆರಂಭ

ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲಾ ಮತ್ತು ಪ್ರೌಢ ಶಾಲಾ ಶಿಕ್ಷಕರು ಬಹಳ ದಿನಗಳಿಂದ ನಿರೀಕ್ಷಿಸುತ್ತಿದ್ದ ವರ್ಗಾವಣೆ (Teacher Transfer) ಪ್ರಕ್ರಿಯೆಯನ್ನು ಶಾಲಾ ಶಿಕ್ಷಣ ಇಲಾಖೆಯು ಮತ್ತೆ ಆರಂಭಿಸಿದ್ದು, ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯು ಜೂನ್‌ 6 ರಿಂದ ಜುಲೈ 31 ರವರೆಗೆ ನಡೆಯಲಿದೆ. ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ರಾಜ್ಯ ಸರ್ಕಾರ ಮೇ … Continued

ವಿದ್ಯುತ್ ಉಚಿತ, ಮನೆ ಯಜಮಾನಿಗೆ 2000 ರೂ, ಅನ್ನಭಾಗ್ಯ, ಮಹಿಳೆಯರಿಗೆ ಉಚಿತ ಬಸ್​, ಯುವನಿಧಿ ; ಐದು ಗ್ಯಾರಂಟಿಗಳಿಗೆ ಸಚಿವ ಸಂಪುಟ ಒಪ್ಪಿಗೆ- ಯಾವಾಗ ಆರಂಭ?

ಬೆಂಗಳೂರು: ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್​ ನೀಡಿದ ಗ್ಯಾರಂಟಿಗಳನ್ನು (Congress Guarantee) ತಪ್ಪದೇ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಜುಲೈ ತಿಂಗಳಿನಿಂದ 200 ಯೂನಿಟ್ ವರೆಗೆ ವಿದ್ಯುತ್ ಉಚಿತ, ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ದಿನದಂದು ಗೃಹ ಲಕ್ಷ್ಮೀ ಯೋಜನೆಯ ಅಡಿಯಲ್ಲಿ ಮನೆಯ ಒಡತಿಗೆ ಪ್ರತಿ ತಿಂಗಳು 2,000 ರೂ. ಹಣ ಖಾತೆಗೆ … Continued

ಜೂನ್‌ 11ರಿಂದ ಎಲ್ಲ ಮಹಿಳೆಯರಿಗೂ ಬಸ್‌ ಪ್ರಯಾಣ ಉಚಿತ ; ಆದರೆ ಈ ಬಸ್‌ ಗಳಲ್ಲಿ ಇಲ್ಲ

ಬೆಂಗಳೂರು : ಕಾಂಗ್ರೆಸ್‌ ಚುನಾವಣೆ ವೇಳೆ ನೀಡಿದ್ದ ಭರವಸೆಯಂತೆ ಎಲ್ಲ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣವನ್ನು ಘೋಷಣೆ ಮಾಡಿದೆ. ರಾಜ್ಯ ಸರ್ಕಾರ ಈ ಯೋಜನೆಗೆ ಯಾವುದೇ ನಿರ್ಬಂಧವನ್ನು ವಿಧಿಸಿಲ್ಲ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಹಿಳೆಯರಿಗೆ ಬಸ್‌ನಲ್ಲಿ … Continued

ಮಹಿಳಾ ಕುಸ್ತಿಪಟುಗಳ ಅನುಚಿತ ಸ್ಪರ್ಶ, ಲೈಂಗಿಕ ಫೇವರ್‌ ಕೇಳಿದ ಡಬ್ಲ್ಯುಎಫ್‌ಐ ಮುಖ್ಯಸ್ಥ : 2 ಎಫ್‌ಐಆರ್‌ಗಳು, 10 ದೂರುಗಳು

ನವದೆಹಲಿ: ಭಾರತೀಯ ರೆಸ್ಲಿಂಗ್ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಆರೋಪಗಳ ಆಧಾರದ ಮೇಲೆ ದೆಹಲಿ ಪೊಲೀಸರು ಎರಡು ಎಫ್‌ಐಆರ್ ಮತ್ತು 10 ದೂರುಗಳನ್ನು ದಾಖಲಿಸಿದ್ದಾರೆ. ಇಂಡಿಯಾ ಟುಡೆ ಪ್ರಕಾರ, ಎರಡು ಎಫ್‌ಐಆರ್‌ಗಳ ಪ್ರಕಾರ, ಡಬ್ಲ್ಯುಎಫ್‌ಐ ಮುಖ್ಯಸ್ಥರು ಲೈಂಗಿಕ ಅನುಕೂಲಕ್ಕಾಗಿ ಬೇಡಿಕೆ ಇಟ್ಟಿದ್ದಾರೆ … Continued

ಐಬಿಪಿಎಸ್ ನಿಂದ 8594 ಆರ್‌ಆರ್‌ಬಿ ಬ್ಯಾಂಕ್ ಹುದ್ದೆಗಳಿಗೆ ಅಧಿಸೂಚನೆ : ಅರ್ಜಿ ಸ್ವೀಕಾರ ಆರಂಭ

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ(IBPS)ಯು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ವಿವಿಧ ಶ್ರೇಣಿಯ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ, ಸಾಮಾನ್ಯ ನೇಮಕಾತಿ ಪ್ರಕ್ರಿಯೆಯಾದ ಸ್ಪರ್ಧಾತ್ಮಕ ಪರೀಕ್ಷೆಗೆ ನೋಟಿಫಿಕೇಶನ್‌ ಪ್ರಕಟಿಸಿದೆ. ಗ್ರೂಪ್‌ ಎ (ಸ್ಕೇಲ್‌ -1, 2, 3), ಗ್ರೂಪ್‌ ಬಿ ಹುದ್ದೆಗಳನ್ನು ಆರ್‌ಆರ್‌ಬಿಗಳಲ್ಲಿ ಪ್ರಮುಖವಾಗಿ ನೇಮಕ ಮಾಡಲು ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಅಧಿಸೂಚನೆಯನ್ನು … Continued