ವಿವಾದಕ್ಕೆ ಕಾರಣವಾಯ್ತು ಕೇರಳದ ಕಾಂಗ್ರೆಸ್‌ ಮಿತ್ರಪಕ್ಷ ಮುಸ್ಲಿಂ ಲೀಗ್ ‘ಜಾತ್ಯತೀತ ಪಕ್ಷ’ ಎಂದು ರಾಹುಲ್ ಗಾಂಧಿ ಅಮೆರಿಕದಲ್ಲಿ ನೀಡಿದ ಹೇಳಿಕೆ

ಕೇರಳದಲ್ಲಿ ಕಾಂಗ್ರೆಸ್‌ನ ಮಿತ್ರ ಪಕ್ಷವಾಗಿರುವ ಮುಸ್ಲಿಂ ಲೀಗ್ ಅನ್ನು “ಸಂಪೂರ್ಣ ಜಾತ್ಯತೀತ ಪಕ್ಷ” ಎಂದು ರಾಹುಲ್‌ ಗಾಂಧಿ ಬಣ್ಣಿಸಿದ ನಂತರ ಶುಕ್ರವಾರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮತ್ತೆ ವಾಗ್ಯುದ್ಧ ಆರಂಭವಾಗಿದೆ.
ವಾಷಿಂಗ್ಟನ್ ಡಿಸಿಯ ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ಮಾಧ್ಯಮ ಸಂವಾದದ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಹೇಳಿಕೆಗಳು ಫ್ಲ್ಯಾಶ್ ಪಾಯಿಂಟ್ ಆಗಿತ್ತು. ಜಾತ್ಯತೀತತೆಯನ್ನು ಪ್ರತಿಪಾದಿಸುವ ಮತ್ತು ಬಿಜೆಪಿಯ ಹಿಂದುತ್ವ ರಾಜಕಾರಣವನ್ನು ವಿರೋಧಿಸುವ ಕಾಂಗ್ರೆಸ್‌ ಕೇರಳದಲ್ಲಿ ಮುಸ್ಲಿಂ ಲೀಗ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ವರದಿಗಾರರೊಬ್ಬರು ರಾಹುಲ್ ಗಾಂಧಿಯವರನ್ನು ಪ್ರಶ್ನಿಸಿದ್ದಾರೆ.
ಅದಕ್ಕೆ ಉತ್ತರಿಸಿದ ರಾಹುಲ್‌ ಗಾಂಧಿ, “ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಪಕ್ಷವಾಗಿದೆ. ಮುಸ್ಲಿಂ ಲೀಗ್‌ನಲ್ಲಿ ಜಾತ್ಯತೀತವಲ್ಲದ ಯಾವುದೂ ಇಲ್ಲ ಎಂದು ಹೇಳಿದರು. ಹಾಗೂ “[ಪ್ರಶ್ನೆ ಕೇಳಿದ] ವ್ಯಕ್ತಿ ಮುಸ್ಲಿಂ ಲೀಗ್ ಬಗ್ಗೆ ಅಧ್ಯಯನ ಮಾಡಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದರು.
ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆಯ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬಿಜೆಪಿಯು ರಾಹುಲ್‌ ಗಾಂಧಿ ತಮ್ಮ ಹಿಂದಿನ ಲೋಕಸಭಾ ಕ್ಷೇತ್ರವಾದ ವಯನಾಡಿನಲ್ಲಿ ತಾನು ಉಳಿಯಲು ಮುಸ್ಲಿಂ ಲೀಗ್ ಅನ್ನು ‘ಜಾತ್ಯತೀತ ಪಕ್ಷ’ ಎಂದು ಹೇಳಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

“ರಾಹುಲ್ ಗಾಂಧಿಯವರ ಪ್ರಕಾರ ಧಾರ್ಮಿಕ ನೆಲೆಯಲ್ಲಿ ಭಾರತದ ವಿಭಜನೆಗೆ ಕಾರಣವಾದ ಪಕ್ಷವಾದ ಜಿನ್ನಾರ ಮುಸ್ಲಿಂ ಲೀಗ್ ‘ಜಾತ್ಯತೀತ’ ಪಕ್ಷವಾಗಿದೆ. ರಾಹುಲ್ ಗಾಂಧಿಯವರು ಸರಿಯಾಗಿ ಅಧ್ಯಯನ ಮಾಡಿಲ್ಲ ಎಂದು ಬಿಜೆಪಿ ಐ-ಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ಟ್ವೀಟ್ ಮಾಡಿದ್ದಾರೆ.
ಮೊಹಮ್ಮದ್ ಅಲಿ ಜಿನ್ನಾ ನೇತೃತ್ವದ ಮುಸ್ಲಿಂ ಲೀಗ್ ಮತ್ತು ಕೇರಳ ಮೂಲದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಎರಡು ವಿಭಿನ್ನ ಪಕ್ಷಗಳಾಗಿವೆ. ಐಯುಎಂಎಲ್ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ನ ಸಾಂಪ್ರದಾಯಿಕ ಮಿತ್ರ ಪಕ್ಷವಾಗಿದೆ.
ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ತಬಿಜೆಪಿಯ ಆರೋಪಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ ನೀವು ಅನಕ್ಷರಸ್ಥರೇ ? ಎಂದು ಅವರು ಟ್ವೀಟ್ ಮಾಡಿದ್ದಾರೆ.
“ಕೇರಳದ ಮುಸ್ಲಿಂ ಲೀಗ್ ಮತ್ತು ಜಿನ್ನಾರ ಮುಸ್ಲಿಂ ಲೀಗ್ ನಡುವಿನ ವ್ಯತ್ಯಾಸ ಗೊತ್ತಿಲ್ಲವೇ? ಜಿನ್ನಾರ ಮುಸ್ಲಿಂ ಲೀಗ್ ನಿಮ್ಮ ಪೂರ್ವಜರು ಮೈತ್ರಿ ಮಾಡಿಕೊಂಡದ್ದು. ಎರಡನೇ ಮುಸ್ಲಿಂ ಲೀಗ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ಖೇರಾ ವಿವರಿಸಿದರು.
ಬಿಜೆಪಿಯ ಸೈದ್ಧಾಂತಿಕ ಪೋಷಕ, ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕ ಮಾತನಾಡಿದ್ದಾರೆ. ಪವನ್‌ ಖೇರಾ ಅವರ ಎರಡನೇ ಉಲ್ಲೇಖವು 2012 ರಲ್ಲಿ ನಾಗ್ಪುರ ಮುನ್ಸಿಪಲ್ ಕಾರ್ಪೊರೇಶನ್‌ನ ಹಿಡಿತವನ್ನು ಉಳಿಸಿಕೊಳ್ಳಲು ಇಬ್ಬರು ಐಯುಎಂಎಲ್ ಕಾರ್ಪೊರೇಟರ್‌ಗಳನ್ನು ಬಿಜೆಪಿ ಸೆಳೆದಿತ್ತು.
ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಸುಪ್ರಿಯಾ ಶ್ರಿನಾಟೆ ಅವರು ಅಮಿತ್ ಮಾಳವಿಯಾ ಅವರು “ನಕಲಿ ಸುದ್ದಿ ವ್ಯಾಪಾರಿ” ಎಂದು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ಹಳಿ ತಪ್ಪಿದ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ ರೈಲಿನ ಹಲವು ಬೋಗಿಗಳು ; ನಾಲ್ವರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಅಮೆರಿಕದ ಮೂರು ನಗರಗಳ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ನ್ಯಾಷನಲ್ ಪ್ರೆಸ್ ಕ್ಲಬ್ ಸಂವಾದದಲ್ಲಿ ಪ್ರತಿಪಕ್ಷಗಳ ಏಕತೆ ಮತ್ತು ಭಾರತದಲ್ಲಿನ ಧಾರ್ಮಿಕ ಸ್ವಾತಂತ್ರ್ಯಗಳು, ಆರ್ಥಿಕತೆ, ಅಲ್ಪಸಂಖ್ಯಾತರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ರಾಜ್ಯದ ಸ್ಥಿತಿ ಸೇರಿದಂತೆ ಹಲವಾರು ವಿಷಯಗಳ ಕುರಿತು ಪ್ರಶ್ನೆಗಳನ್ನು ಎತ್ತಿದರು.
ಪ್ರತಿಪಕ್ಷಗಳು ಸಾಕಷ್ಟು ಒಗ್ಗಟ್ಟಾಗಿವೆ ಮತ್ತು ಮೈದಾನದಲ್ಲಿ ಸಾಕಷ್ಟು ಒಳ್ಳೆಯ ಕೆಲಸಗಳು ನಡೆಯುತ್ತಿವೆ ಎಂದು ಅವರು ಹೇಳಿದರು.
ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಎತ್ತಿ ತೋರಿಸಿದ ಅವರು, “ಮುಂದಿನ ಮೂರ್ನಾಲ್ಕು ರಾಜ್ಯಗಳ ಚುನಾವಣೆಗಳನ್ನು ಕಾದು ನೋಡಿ” ಎಂದು ಹೇಳಿದರು.

ಪ್ರಮುಖ ಸುದ್ದಿ :-   ರೈತರಿಗೆ ಪಿಸ್ತೂಲ್ ತೋರಿಸಿದ ವೀಡಿಯೊ ವೈರಲ್‌ ; ವಿವಾದಿತ ಟ್ರೇನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ ತಾಯಿ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement