ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಿಬ್ಬಂದಿ

ಮಂಗಳೂರು: ನೌಕರನೊಬ್ಬ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ಇಲ್ಲಿನ ಮುಡಾ ಕಚೇರಿ ಉರ್ವದ ಸ್ಟೋರ್ ರೂಂನಲ್ಲಿ ಜೂನ್ 2 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.
ಮೃತರನ್ನು ಪಡೀಲ ಮೂಲದ ಕೀರ್ತನ್ (30) ಎಂದು ಗುರುತಿಸಲಾಗಿದೆ. ಅವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಾಯಂ ಸಿಬ್ಬಂದಿಯಾಗಿದ್ದು, ಮುಡಾ ಕಚೇರಿಯ ಹಳೆಯ ದಾಖಲೆ ಪತ್ರಗಳ ಸಂಗ್ರಹಣಾ ಕೊಠಡಿಯಲ್ಲಿ ಅವರ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೂಲಗಳ ಪ್ರಕಾರ, ಜೂನ್ 2 ರಂದು ಬೆಳಿಗ್ಗೆ 9:30 ರ ಸುಮಾರಿಗೆ ಕೀರ್ತನ್ ಅವರು ಕಚೇರಿಗೆ ಬಂದು ತಮ್ಮ ಸಹೋದ್ಯೋಗಿಗಳೊಂದಿಗೆ ಮಾತನಾಡಿದ್ದರು. ಸ್ವಲ್ಪ ಸಮಯದ ನಂತರ ಅವರು ನಾಪತ್ತೆಯಾಗಿದ್ದರು. ಅವರು ಚಹಾ ಕುಡಿಯಲು ಹೊರಗೆ ಹೋಗಿರಬಹುದು ಎಂದು ಕಚೇರಿ ಸಿಬ್ಬಂದಿ ಭಾವಿಸಿದ್ದರು. ಆದರೆ ಮಧ್ಯಾಹ್ನ 12 ಗಂಟೆಯಾದರೂ ವಾಪಸ್ ಬಂದಿರಲಿಲ್ಲ
ನಂತರ ಕಚೇರಿ ಸಿಬ್ಬಂದಿ ಆತನ ಮೊಬೈಲ್ ಸ್ಥಳವನ್ನು ಪತ್ತೆ ಹಚ್ಚಲು ಪ್ರಯತ್ನಿಸಿದಾಗ ಅದು ಮುಡಾ ಆವರಣದಲ್ಲಿತ್ತು. ನಂತರ ಹುಡುಕಾಟ ನಡೆಸಿದಾಗ ಸ್ಟೋರ್ ರೂಮಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ. ಉರ್ವ ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ಕೆಳಗಿಳಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ತನಿಖೆ ನಂತರವಷ್ಟೇ ಹೆಚ್ಚಿನ ವಿವರಗಳು ತಿಳಿದುಬರಬೇಕಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣ : ತನಿಖೆಗೆ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement