ಜೂನ್‌ 11ರಿಂದ ಎಲ್ಲ ಮಹಿಳೆಯರಿಗೂ ಬಸ್‌ ಪ್ರಯಾಣ ಉಚಿತ ; ಆದರೆ ಈ ಬಸ್‌ ಗಳಲ್ಲಿ ಇಲ್ಲ

ಬೆಂಗಳೂರು : ಕಾಂಗ್ರೆಸ್‌ ಚುನಾವಣೆ ವೇಳೆ ನೀಡಿದ್ದ ಭರವಸೆಯಂತೆ ಎಲ್ಲ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣವನ್ನು ಘೋಷಣೆ ಮಾಡಿದೆ. ರಾಜ್ಯ ಸರ್ಕಾರ ಈ ಯೋಜನೆಗೆ ಯಾವುದೇ ನಿರ್ಬಂಧವನ್ನು ವಿಧಿಸಿಲ್ಲ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣದ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಜೂನ್‌ 11 ರಿಂದ ಹವಾನಿಯಂತ್ರಿತ ಬಸ್‌ಗಳು ಮತ್ತು ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ ಎಲ್ಲ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲೂ ಮಹಿಳೆಯರು ಪ್ರಯಾಣ ಮಾಡಬಹುದು ಎಂದು ಘೋಷಿಸಿದ್ದಾರೆ. ಪುರುಷರಿಗೆ ಶೇ.50ರಷ್ಟು ಆಸನಗಳನ್ನು ಮೀಸಲಿರಿಸಲಾಗುತ್ತದೆ.
ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಅದಲ್ಲದೇ ಕರ್ನಾಟಕದಲ್ಲಿ ಎಲ್ಲಿಂದ ಎಲ್ಲಿಗೆ ಬೇಕಾದರೂ ಪ್ರಯಾಣಿಸಬಹುದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಮಹಿಳೆಯರ ಉಚಿತ ಪ್ರಯಾಣಕ್ಕೆ ಮಾನದಂಡಗಳು…
ಜೂನ್‌ 11ರಿಂದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಪ್ರಾರಂಭ
ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿ ನಾಲ್ಕು ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತ ಪ್ರಯಾಣ
ಎಸಿ, ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ ಎಲ್ಲ ಬಸ್‌ಗಳಲ್ಲೂ ಉಚಿತ ಪ್ರಯಾಣ
ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಶೇ.50ರಷ್ಟು ಆಸನಗಳು ಪುರುಷರಿಗೆ ಮೀಸಲು
ಬಿಎಂಟಿಸಿ ಬಸ್‌ಗಳಲ್ಲಿ ಮಾತ್ರ ಪುರುಷರಿಗೆ ಆಸನಗಳು ಮೀಸಲು ಇಲ್ಲ
ಕರ್ನಾಟಕದ ಎಲ್ಲ ಮಹಿಳೆಯರಿಗೂ ‘ಶಕ್ತಿ’ ಯೋಜನೆ ಅನ್ವಯ
ಕರ್ನಾಟಕ ರಾಜ್ಯದಲ್ಲಿ ಎಲ್ಲಿಂದ ಎಲ್ಲಿಗೆ ಬೇಕಾದರೂ ಪ್ರಯಾಣಿಸಲು ಅವಕಾಶ

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ: ಸಿಎಂ ಸಿದ್ದರಾಮಯ್ಯ

2.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement