ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಸ್ಟೇಟಸ್: ಆರ್‌ ಎಸ್‌ ಎಸ್‌ ಕಾರ್ಯಕರ್ತನ ಬಂಧನ

ರಾಯಚೂರು : ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳಕಾರಿಯಾಗಿ ವಾಟ್ಸಾಪ್‌ ಸ್ಟೇಟಸ್‌ ಹಾಕಿದ ಆರೋಪದ ಮೇಲೆ ಆರ್‌ಎಸ್‌ಎಸ್‌ ಕಾರ್ಯಕರ್ತ ರಾಜು ಎಂಬಾತನ ವಿರುದ್ಧ ರಾಯಚೂರು ಜಿಲ್ಲೆಯ ಲಿಂಗಸುಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಲಿಂಗಸುಗೂರು ಪಟ್ಟಣದ ನಿವಾಸಿ ರಾಜು ಎಂಬಾತ ತನ್ನ ವಾಟ್ಸಾಪ್‌ ಸ್ಟೇಟಸ್‌ನಲ್ಲಿ ‘ಮುಸ್ಲಿಂ ಮಹಿಳೆಯರು ಮಕ್ಕಳನ್ನು ಹೆರುವ ಫ್ಯಾಕ್ಟರಿಗಳು’ ಎಂದು ಬಿಂಬಿಸುವ ವ್ಯಂಗ್ಯಚಿತ್ರವನ್ನು ಪೋಸ್ಟ್‌ ಮಾಡಿದ್ದರು. ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಸ್ಲಿಂ ಸಮುದಾಯದವರು ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.
ಪ್ರತಿಭಟನಾ ಸ್ಥಳಕ್ಕೆ ಬಂದ ಡಿಎಸ್‌ಪಿ ವೇಣುಗೋಪಾಲ ಅವರು, “ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಹಾಗೂ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಗಿದೆ. ಬಳಿಕ ಪ್ರಕರಣವನ್ನ ದಾಖಲಿಸಿಕೊಂಡು ರಾಜು ಎಂಬಾತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement