ಅನ್ನಭಾಗ್ಯ ಯೋಜನೆಯಡಿ ಜುಲೈ1ರಿಂದ 10 ಕೆಜಿ ಉಚಿತ ಅಕ್ಕಿ ವಿತರಣೆ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ಗುರುವಾರ ರಾಜ್ಯ ಸಚಿವ ಸಂಪುಟ ಸಭೆ ಐದು ಗ್ಯಾರಂಟಿ ಯೋಜನೆಗಳಿಗೆ ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ಸಾರ್ವಜನಿಕ ವಿತರಣಾ ಪದ್ದತಿಯಡಿ ವಿತರಿಸಲಾಗಿರುವ ಅಂತ್ಯೋದಯ, ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಯನ್ನು ಹೊದಿರುವ ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯನ್ನು 10 ಕೆಜಿಗೆ ಹೆಚ್ಚಿಸಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಈ ಕುರಿತು ಇಂದು ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ. ಅದರಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗಿರುವ ಅತ್ಯೋದಯ ಅನ್ನಯೋಜನೆ (AAY), ಆದ್ಯತಾ ಕುಟುಂಬ ಪಡಿತರ ಚೀಟಿಗಳು ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ವಿತರಿಸಲಾಗಿರುವ ಆದ್ಯತಾ ಪಡಿತರ ಚೀಟಿಗಳ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಆಹಾರ ಧಾನ್ಯವನ್ನು ಜುಲೈ 1ರಿಂದ ಅನ್ವಯವಾಗುವಂತೆ ಉಚಿತವಾಗಿ ವಿತರಿಸಲು ಆದೇಶಿಸಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಇಂದಿನ ಪ್ರಮುಖ ಸುದ್ದಿ :-   ಹುಕ್ಕೇರಿ : ಹಳ್ಳದ ನೀರಿನಲ್ಲಿ ಸಿಲುಕಿದ ಶಾಲಾ ಬಸ್‌ ; ತಪ್ಪಿದ ಅನಾಹುತ

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

2 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement