‘ಯುವನಿಧಿ ಯೋಜನೆ’ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಭರವಸೆಗಳನ್ನು ನೀಡಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಜುಲೈ 2ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು.ವ ಈ ಬೆನ್ನಲ್ಲೇ ಇಂದು ಯುವನಿಧಿ ಯೋಜನೆ ಜಾರಿಗೊಳಿಸಿ ಸರ್ಕಾರ ಆದೇಶ ಮಾಡಿದೆ.
ಈ ಸಂಬಂಧ ಇಂದು, ಶುಕ್ರವಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದಲ್ಲಿ 2022-23ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3000 ರೂ. ಹಾಗೂ ಡಿಪ್ಲೋಮಾ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1500 ರೂ. ಗಳಂತೆ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯನ್ನು ಜಾರಿಗೊಳಿಸಲು ಆದೇಶ ಮಾಡಿದೆ.
2023ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ ( ವೃತ್ತಿಪರ ಕೋರ್ಸ್ ಗಳು ಸೇರಿದಂತೆ) ಪ್ರತಿ ತಿಂಗಳು 3000 ರೂ. ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1500 ರೂ.ನಿರುದ್ಯೋಗ ಭತ್ಯೆಯನ್ನು ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲು ಯುವ ನಿಧಿ ಯೋಜನೆಯನ್ನು ಜಾರಿಗೊಳಿಸಲಾಗಿವುದಾಗಿ ತಿಳಿಸಲಾಗಿದೆ.
ಯುವ ನಿಧಿ ಯೋಜನೆ ಸೌಲಭ್ಯ ಪಡೆಯಲು ಕೆಲ ಷರತ್ತುಗಳನ್ನು ಕೂಡ ವಿಧಿಸಲಾಗಿದೆ. ಅದರಲ್ಲಿ ಪದವಿ, ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೆ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ.
ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ವರೆಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುತ್ತದೆ. ಭತ್ಯೆಯನ್ನು ಡಿಬಿಟಿ ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಾಲಾಭುವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣದ ಹಿಂದೆ ಡಿಕೆ ಶಿವಕುಮಾರ ಕೈವಾಡ : ವಕೀಲ ದೇವರಾಜೇಗೌಡ ಗಂಭೀರ ಆರೋಪ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement