4055 ಅತಿಥಿ ಉಪನ್ಯಾಸಕರ ನೇಮಕಾತಿಗೆ ಆದೇಶ

ಬೆಂಗಳೂರು: 2023-24ನೇ ಶೈಕ್ಷಣಿಕ ಸಾಲಿಗಾಗಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರುಗಳ ಹುದ್ದೆಗಳಿಗೆ 4055 ಅತಿಥಿ ಉಪನ್ಯಾಸಕರುಗಳನ್ನು ನೇಮಕ ಮಾಡಲು ಸರ್ಕಾರ ಮುಂದಾಗಿದೆ.
2023-24ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳು, ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳು ಹಾಗೂ ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳಿಗೆ ನೇಮಕ ಮಾಡಿಕೊಳ್ಳಬೇಕಾದ ಒಟ್ಟು 4055 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಆದೇಶಿಸಿದೆ. ಮಾಸಿಕ 12,000 ರೂ.ಗಳ ಗೌರವಧನ ನೀಡಲಾಗುತ್ತದೆ. ಮಾರ್ಚ್ 2024ರ ಅಂತ್ಯಕ್ಕೆ ಖಾಲಿಯಾಗುವ ಹುದ್ದೆಗಳಿಗೆ, ಕಾರ್ಯಭಾರ ಕಡಿಮೆ ಇರುವ ವಿಷಯಗಳ ಉಪನ್ಯಾಸಕರುಗಳನ್ನು ಸರಿದೂಗಿಸಿದ ನಂತರ ಲಭ್ಯವಾಗುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲು ಅನುಮತಿಸಲಾಗಿದೆ ಎಂದು ತಿಳಿಸಲಾಗಿದೆ.

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement