ಕಲಬುರುಗಿ : ನಿಧಿ ಆಸೆಗಾಗಿ ದುಷ್ಕರ್ಮಿಗಳು ದೇಗುಲದಲ್ಲಿ ಶಿವಲಿಂಗವನ್ನೇ ಕಿತ್ತು ಹಾಕಿದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಹೋಬಳಿ ವಲಯದ ನಡೆದ ವರದಿಯಾಗಿದೆ.
ಕಳೆದ ರಾತ್ರಿ ಎನ್. ಸೂಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಮಲ್ಲಿಕಾರ್ಜುನ ದೇವಸ್ಥಾನದಲ್ಲಿರುವ ಶಿವಲಿಂಗದ ಅಡಿಭಾಗದಲ್ಲಿ ನಿಧಿ ಇರಬಹುದು ಎಂಬ ದುರಾಸೆಯಲ್ಲಿ ದುಷ್ಕರ್ಮಿಗಳು ಶಿವಲಿಂಗವನ್ನು ಕಿತ್ತು ನಿಧಿಗಾಗಿ ಅಗೆದು ಹುಡುಕಾಟ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಗ್ರಾಮದ ಹೊರ ವಲಯದ ನಿರ್ಜನ ಪ್ರದೇಶದಲ್ಲಿರುವ ಸುಮಾರು 200 ವರ್ಷಗಳಷ್ಟು ಹಳೆಯದ್ದು ಎನ್ನಲಾಗಿದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನೆ ನಡೆದ ಸ್ಥಳಕ್ಕೆ ವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಕೃತ್ಯಕ್ಕೆ ಜನರು ಕಿಡಿಕಾರಿದ್ದು, ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ