ಶೀಘ್ರವೇ 15000 ಪೊಲೀಸ್ ಪೇದೆಗಳ ಹುದ್ದೆ ಭರ್ತಿ: ಗೃಹ ಸಚಿವ ಡಾ. ಜಿ.ಪರಮೇಶ್ವರ

ಬೆಂಗಳೂರು : ಶೀಘ್ರವೇ 15000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಶೀಘ್ರವೇ 15,000 ಪೊಲೀಸ್ ಪೇದೆಗಳ ನೇಮಕಾತಿ ಮಾಡಲಾಗುತ್ತದೆ ಎಂದರು. ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸುವ ನಿಟ್ಟಿನಲ್ಲಿ 15, 000 ಪೊಲೀಸ್ ಪೇದೆಗಳ ನೇಮಕಾತಿ ಮಾಡಲಾಗುತ್ತದೆ. ಇದರಿಂದ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದ ಅವರು, ಪಿಎಸ್ ಐ ನೇಮಕಾತಿ ಹಗರಣದ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.
ಔರಾದ್ಕರ್ ವರದಿ ಜಾರಿ ಬಗ್ಗೆ ಪರಿಶೀಲನೆ ನಡೆಸಲಾಗುವುದು, 7ನೇ ವೇತನ ಆಯೋಗ ಜಾರಿಗೆ ಮಾಡಿದಲ್ಲಿ ಪ್ರತ್ಯೇಕವಾಗಿ ಔರಾದ್ಕರ್ ವರದಿ ಜಾರಿ ಮಾಡುವ ಅಗತ್ಯ ಇಲ್ಲ ಎಂದು ತಿಳಿಸಿದರು.

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಐದು ಸಮಿತಿ ರಚನೆ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement