ರಾಜ್ಯದ ಜನತೆಗೆ ರಾಜ್ಯ ಸರ್ಕಾರದಿಂದ ಶಾಕ್ : ಜೂನ್‌1 ರಿಂದಲೇ ವಿದ್ಯುತ್ ದರ ಹೆಚ್ಚಳ…!

ಬೆಂಗಳೂರು : ರಾಜ್ಯದಲ್ಲಿ ಪ್ರತಿಮನೆಗೆ ವಾರ್ಷಿಕ ಸರಾಸರಿ ಆಧಾರದ ಮೇಲೆ ಗರಿಷ್ಠ 200 ಯೂನಿಟ್ ವರೆಗೆ ವಿದ್ಯುತ್ ಉಚಿತವಾಗಿ ನೀಡುವ ‘ಗೃಹಜ್ಯೋತಿ’ ಯೋಜನೆಯನ್ನು ಸರ್ಕಾರ ಜಾರಿ ಮಾಡಲು ನಿರ್ಧರಿಸಿರುವ ಬೆನ್ನಲ್ಲೇ ಗ್ರಾಹಕರಿಗೆ ವಿದ್ಯುತ್ ದರ ಏರಿಕೆಯ ಶಾಕ್‌ ಎದುರಾಗಿದೆ. ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗ ಪ್ರತಿ ಯೂನಿಟ್ ವಿದ್ಯುತ್‌ಗೆ ಶುಲ್ಕವನ್ನು ಶೇ. 8ರಷ್ಟು (ಯೂನಿಟ್ ಗೆ … Continued

ನಾನು ಭಾರತಕ್ಕೆ ಹಿಂತಿರುಗಿದಾಗ ನನ್ನನ್ನು ನೋಡಿ : ಅಮೆರಿಕದಲ್ಲಿ ರಾಹುಲ್ ಗಾಂಧಿ ಹೇಳಿಕೆಗೆ ವಿದೇಶಾಂಗ ಸಚಿವ ಜೈಶಂಕರ ಉತ್ತರ

ಕೇಪ್‌ಟೌನ್‌: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಅಮೆರಿಕದಲ್ಲಿ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ವಿದೇಶಾಂಗ ಸಚಿವ ಎಸ್‌.ಜೈಶಂಕರ ಅವರು ಶನಿವಾರ ವಾಗ್ದಾಳಿ ನಡೆಸಿದ್ದು, ವಿದೇಶಕ್ಕೆ ಹೋದಾಗ ರಾಜಕೀಯ ಮಾಡುವುದನ್ನು ಬಿಟ್ಟು, ಭಾರತಕ್ಕೆ ಮರಳಿದ ನಂತರ ಇದಕ್ಕೆ ಉತ್ತರಿಸುವುದಾಗಿ ಹೇಳಿದೆ. ರಾಹುಲ್ ಗಾಂಧಿಯನ್ನು ಹೆಸರಿಸದೆ, ಸಚಿವ ಜೈಶಂಕರ ಅವರು ಟೀಕಿಸಿದ್ದಾರೆ. ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಲು … Continued

ಅನ್ನಭಾಗ್ಯ, ಯುವ ನಿಧಿ ಗ್ಯಾರಂಟಿ ಯೋಜನಗಳಿಗೆ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಬೆಂಗಳೂರು: ಕಾಂಗ್ರೆಸ್ಸಿನ ಚುನಾವಣಾ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿಗಳ ಪೈಕಿ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಮತ್ತು ಅನ್ನ ಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಆದ್ಯತಾ (ಬಿಪಿಎಲ್) ಕುಟುಂಬಗಳ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲು ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಶುಕ್ರವಾರ ನಡೆದ ಸಂಪುಟ ಸಭೆಯ ನಿರ್ಣಯದಂತೆ ಈ ಆದೇಶಗಳನ್ನು ಹೊರಡಿಸಲಾಗಿದೆ. ಕೌಶಲಾಭಿವೃದ್ಧಿ, … Continued

ಒಡಿಶಾ ರೈಲು ದುರಂತ : ‘ವಿದ್ಯುನ್ಮಾನ ಇಂಟರ್‌ಲಾಕಿಂಗ್‌ನಲ್ಲಿ ಬದಲಾವಣೆ’ಯಿಂದ ಅಪಘಾತ ; ರೈಲ್ವೆ ಸಚಿವ ಅಶ್ವಿನಿ ವೈಷ್ಣವ

ನವದೆಹಲಿ: ಟ್ರಿಪಲ್ ರೈಲು ಡಿಕ್ಕಿ ಸಂಭವಿಸಿದ ಒಡಿಶಾದ ಬಾಲಸೋರ್‌ನಲ್ಲಿ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ನಂತರ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತದ ಮೂಲ ಕಾರಣವನ್ನು ಗುರುತಿಸಲಾಗಿದೆ ಎಂದು ಭಾನುವಾರ ಹೇಳಿದ್ದಾರೆ. ರೈಲು ಅಪಘಾತದ ತನಿಖೆ ಪೂರ್ಣಗೊಂಡಿದ್ದು, ರೈಲು ಸುರಕ್ಷತಾ ಆಯುಕ್ತರು ಆದಷ್ಟು ಬೇಗ ವರದಿ ಸಲ್ಲಿಸಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. “ರೈಲ್ವೆ … Continued

ಮಂಡ್ಯ : ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದ ಕಾರು, ನಾಲ್ವರು ಸ್ಥಳದಲ್ಲೇ ಸಾವು

ಮಂಡ್ಯ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಪುರ ಗೇಟ್ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ. ಕಾರಿನ ಅತಿಯಾದ ವೇಗ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಕಾರಿನಲ್ಲಿದ್ದ ಹೇಮಂತ, ಶರತ, ನವೀನ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು … Continued

ಅತ್ಯಾಚಾರ ಸಂತ್ರಸ್ತೆಯ ಕುಜ ದೋಷ ಪರಿಶೀಲಿಸಲು ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶಕ್ಕೆ ತಡೆ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಅತ್ಯಾಚಾರ ಸಂತ್ರಸ್ತೆಯ ಕುಜ ದೋಷ ಅಧ್ಯಯನ ಮಾಡಲು ಲಕ್ನೋ ವಿಶ್ವವಿದ್ಯಾನಿಲಯದ ಜ್ಯೋತಿಷ್ಯ ವಿಭಾಗಕ್ಕೆ ಸೂಚಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಮದುವೆಯ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯು ನಂತರದಲ್ಲಿ ಕುಜ ದೋಷ ನೆಪವೊಡ್ಡಿ ಮದುವೆ ತಿರಸ್ಕರಿಸಿದ್ದ. ಆರೋಪಿಯ ಜಾಮೀನು ಅರ್ಜಿ ನಿರ್ಧರಿಸುವ ಸಂದರ್ಭದಲ್ಲಿ ಅಲಹಾಬಾದ್‌ ಹೈಕೋರ್ಟ್ ಸಂತ್ರಸ್ತೆಯ ಕುಜದೋಷ … Continued

ಚಿಕ್ಕಮಗಳೂರು: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಚಿಕ್ಕಮಗಳೂರು: ನೂತನ ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಯುವಕನ ಕೊಲೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ಯುವಕನನ್ನು ವರುಣ್(28) ಎಂದು ಗುರುತಿಸಲಾಗಿದೆ. ತರೀಕೆರೆ ಶಾಸಕ ಶ್ರೀನಿವಾಸ್‌ ಅವರಿಗೆ ಅಭಿಮಾನಿಗಳು ಅಭಿನಂದನಾ ಸಮಾರಂಭವನ್ನ ಏರ್ಪಡಿಸಿದ್ದರು. ಈ ವೇಳೆ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು … Continued