ಮಧ್ಯರಾತ್ರಿ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಕುಸ್ತಿಪಟುಗಳು: ಕಾನೂನು ಕ್ರಮಕ್ಕೆ ಒತ್ತಾಯ

ನವದೆಹಲಿ: ಬಿಜೆಪಿ ಸಂಸದ ಮತ್ತು ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಭಾನುವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.
ಭಾನುವಾರ ರಾತ್ರಿ 11 ಗಂಟೆಗೆ ಆರಂಭವಾದ ಸಭೆಯು ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು. ಈ ಸಭೆಯಲ್ಲಿ ಪುನಿಯಾ, ಸಾಕ್ಷಿ ಮಲಿಕ್, ಸಂಗೀತಾ ಫೋಗಟ್ ಮತ್ತು ಸತ್ಯವರ್ತ್ ಕಡಿಯನ್ ಸಮಸ್ಯೆಗಳನ್ನು ವಿವರಿಸಿದರು. ಅಪ್ರಾಪ್ತ ಬಾಲಕಿ ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಹಾಗೂ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಕುಸ್ತಿಪಟುಗಳು ಒತ್ತಾಯಿಸಿದ್ದಾರೆ.
ಕಾನೂನು ಎಲ್ಲರಿಗೂ ಒಂದೇ. ನಾವು ನಿಪ್ಷಕ್ಷವಾದ ತನಿಖೆ ನಡೆಸುತ್ತೇವೆ. ಅಪರಾಧ ಸಾಬೀತಾದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಅಮಿತ್ ಶಾ ಈ ವೇಳೆ ಭರವಸೆ ನೀಡಿದ್ದಾರೆ. ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕ್ರಮಕ್ಕಾಗಿ ನೀಡಿದ್ದ ಐದು ದಿನಗಳ ಗಡುವು ಮುಕ್ಯಾಯವಾದ ಹಿನ್ನೆಲೆಯಲ್ಲಿ, ಕುಸ್ತಿಪಟುಗಳು ಗೃಹ ಸಚಿವರನ್ನು ಭೇಟಿಯಾಗಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ...| ವಡೋದರಾ ಬಳಿ ಗಂಭೀರಾ ಸೇತುವೆ ಕುಸಿತ : ನದಿಗೆ ಬಿದ್ದ ಹಲವು ವಾಹನಗಳು, 9 ಜನರು ಸಾವು

ಬ್ರಿಜ್ ಭೂಷಣ್ ಮೇಲೆ ಕ್ರಮಕ್ಕೆ ಆಗ್ರಹಿಸಿ ಸಾಕಷ್ಟು ಪ್ರತಿಭಟನೆ, ಸರ್ಕಾರದ ಮೇಲೆ ಒತ್ತಡ ಹಾಕಿದರೂ, ಸರ್ಕಾರ ಮಾತ್ರ ಮೌನಕ್ಕೆ ಶರಣಾಗಿದೆ. ಇದರಿಂದ ಬೇಸತ್ತ ಕುಸ್ತಿಪಟುಗು ತಮ್ಮ ಪದಕವನ್ನು ಗಂಗಾ ನದಿಯನ್ನು ಎಸೆಯುವುದಾಗಿ ಘೋಷಿಸಿದ್ದರು. ಮಧ್ಯ ಪ್ರವೇಶಿಸಿದ ಪ್ರಮುಖ ನಾಯಕರು, ರೈತ ಸಂಘಟನೆಗಳ ಮುಖಂಡರು ಕುಸ್ತಿಪಟುಗಳ ಮನವೊಲಿಸಿದ್ದರು.
ಆರು ಕುಸ್ತಿಪಟುಗಳ ನೀಡಿದ ದೂರು, ಅಪ್ರಾಪ್ತ ಕುಸ್ತಿಪಟುವಿನ ತಂದೆ ನೀಡಿದ ದೂರು ಆಧರಿಸಿ ಪೊಲೀಸರು ಬ್ರಿಜ್ ಭೂಷಣ್ ಮೇಲೆ 2 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದು,
ನನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ, ನಾನು ನೇಣು ಹಾಕಿಕೊಳ್ಳುತ್ತೇನೆ. ನೀವು ಯಾವುದೇ ಸಾಕ್ಷ್ಯವನ್ನು ಹೊಂದಿದ್ದರೆ, ಅದನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ನಾನು ನಾರ್ಕೋ ಟೆಸ್ಟ್ ಅಥವಾ ಪಾಲಿಗ್ರಾಫ್ ಪರೀಕ್ಷೆ ಮಾಡಿಸಿಕೊಳ್ಳಲು ಸಿದ್ಧ ಎಂದು ಬ್ರಿಜ್ ಭೂಷಣ್ ಶರಣ್ ಸಿಂಗ್ ಕಳೆದ ವಾರ ಹೇಳಿದ್ದರು.
ಅಂತಾರಾಷ್ಟ್ರೀಯ ಕುಸ್ತಿ ಫೆಡರೇಷನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಬ್ರಿಜ್ ಭೂಷಣ್ ಸಿಂಗ್ ಮೇಲೆ ಇದುವರೆಗೂ ಯಾವುದೇ ಕ್ರಮಗಳಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಇನ್ನು 45 ದಿನಗಳಲ್ಲಿ ಹೊಸ ಚುನಾವಣೆ ನಡೆಸಲಿದ್ದು, ಅಲ್ಲಿಯವರೆಗೆ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಕುಸ್ತಿ ಫೆಡರೇಷನ್‌ನನ್ನು ಅಮಾನತುಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಪ್ರಮುಖ ಸುದ್ದಿ :-   ಮೋದಿ, ಆರ್‌ಎಸ್‌ಎಸ್‌ ನ 'ಅವಹೇಳನಕಾರಿ' ವ್ಯಂಗ್ಯಚಿತ್ರ : ಕಾರ್ಟೂನಿಸ್ಟ್‌ ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಮಧ್ಯಪ್ರದೇಶ ಹೈಕೋರ್ಟ್‌

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement