ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ, ಭಾರೀ ಗಾಳಿ ಮಳೆ ಸಾಧ್ಯತೆ : ಕರಾವಳಿ ಜಿಲ್ಲೆಗಳಿಗೆ ಮುನ್ಸೂಚನೆ

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ ಕರಾವಳಿ ಭಾಗದಲ್ಲಿ 4 ದಿನ ಮಳೆಯಾಗುವ (Rain) ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯುವುದನ್ನು ನಿಷೇಧಿಸಲಾಗಿದೆ. ಪ್ರವಾಸಿಗರು, ಸ್ಥಳೀಯರು ಸಮುದ್ರ, ನದಿ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿ ಬೀಸಲಿದ್ದು, ಗಂಟೆಗೆ 40ರಿಂದ 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಕರಾವಳಿ ತೀರದ ಜನರು ಎಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯು 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಅದೇ ರೀತಿ, ಮುಂದಿನ 48 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನ ಪ್ರಮುಖ ಸುದ್ದಿ :-   ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಐದು ಸಮಿತಿ ರಚನೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement