ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆಯ ಮರುಮೌಲ್ಯಮಾಪನದ ಫಲಿತಾಂಶವನ್ನು ಇಂದು, ಮಂಗಳವಾರ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.
ಎಸ್ ಎಸ್ ಎಲ್ ಸಿ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪಕನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ಜಾಲತಾಣ kseeb.karnataka.gov.in ಜಾಲತಾಣಕ್ಕೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದಂತ ವಿದ್ಯಾರ್ಥಿಗಳು www.kseeb.karnataka.gov.in ಗೆ ಭೇಟಿ ನೀಡಬೇಕು.
ಮುಖಪುಟದಲ್ಲಿ ಮಾರ್ಚ್/ಏಪ್ರಿಲ್ 2023ರ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಯ ಮರುಎಣಿಕೆ/ಮರುಮೌಲ್ಯಮಾಪನದ ಪರಿಷ್ಕೃತ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ನಂತರ ಮತ್ತೊಂದು ಪುಟ ತೆರೆದುಕೊಳ್ಳುತ್ತದೆ.
ಆ ಪುಟದಲ್ಲಿ ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮದಿನಾಂಕವನ್ನು ಟೈಪ್ ಮಾಡಿ.
ನಂತರ View Your Results ಎಂಬಲ್ಲಿ ಕ್ಲಿಕ್ ಮಾಡಿ.
ಫಲಿತಾಂಶ ಪರದೆಯ ಮೇಲೆ ಕಾಣಸಿಗುತ್ತದೆ. ಅದನ್ನು ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ.
ನಿಮ್ಮ ಕಾಮೆಂಟ್ ಬರೆಯಿರಿ