ಹಾವೇರಿ : ಲೋಕಸಭೆ ಚುನಾವಣೆಗೂ ಮುನ್ನ ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶಿವಕುಮಾರ ಉದಾಸಿ ಅವರು ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ.
2024ರ ಲೋಕಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವ ಸಂದರ್ಭದಲ್ಲಿ ಇವರು ಚುನಾವಣಾ ರಾಜಕೀಯಕ್ಕೆ ಗುಡ್‌ಬೈ ಹೇಳಿರುವುದು ಪಕ್ಷದ ಕಾರ್ಯಕರ್ತರಿಗೆ ಆಘಾತ ಮತ್ತು ಅಚ್ಚರಿ ತಂದಿದೆ.
ಈ ಕುರಿತು ಮಾತನಾಡಿರುವ ಸಂಸದ ಶಿವಕುಮಾರ ಉದಾಸಿ, ಒಂದು ವರ್ಷದ ಹಿಂದೆಯೇ ಚುನಾವಣೆಗೆ ನಿಲ್ಲುವುದಿಲ್ಲ ಎಂದು ನಿರ್ಧಾರ ತೆಗೆದುಕೊಂಡಿದ್ದೇನೆ. ಈ ಬಗ್ಗೆ ಈಗಾಗಲೇ ಪಕ್ಷದ ನಾಯಕರಿಗೆ ತಿಳಿಸಿದ್ದೇನೆ. ವೈಯಕ್ತಿಕ ಕಾರಣದಿಂದ ರಾಜಕೀಯದಿಂದಲೇ ದೂರ ಉಳಿಯುತ್ತಿದ್ದೇನೆ.2024 ರ ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಇಷ್ಟು ವರ್ಷ ನಮ್ಮ ಉದ್ಯಮ ಸಂಸ್ಥೆಯ ವ್ಯಾವಹಾರಿಕ ಪಾಲುದಾರರು ಎಲ್ಲವನ್ನೂ ನೋಡಿಕೊಳ್ಳುತ್ತಿದ್ದರು. ಇದರಿಂದ ನನಗೆ ಅನುಕೂಲವಾಗಿತ್ತು. ಆದರೆ ಇತ್ತೀಚೆಗೆ ನಮ್ಮ ಪಾಲುದಾರ ಅನಾರೋಗ್ಯಕ್ಕೀಡಾಗಿದ್ದಾರೆ. ಸಂಸ್ಥೆಯಲ್ಲಿ ಸುಮಾರು 250 ಮಂದಿ ಉದ್ಯೋಗಿಗಳಿದ್ದಾರೆ. ಹೀಗಾಗಿ ನಾನೇ ಸಂಪೂರ್ಣ ವ್ಯವಹಾರದ ಜವಾಬ್ದಾರಿ ನೋಡಿಕೊಳ್ಳಬೇಕಾಗಿದ್ದು, ಈ ಕಾರಣದಿಂದ ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
2009, 2014 ಮತ್ತು 2019ರ ಮೂರು ಲೋಕಸಭಾ ಚುನಾವಣೆಗಳಲ್ಲೂ ಶಿವಕುಮಾರ ಉದಾಸಿ ಅವರು ಬಿಜೆಪಿಯಿಂದ ಸ್ಪರ್ಧಿಸಿ, ಹ್ಯಾಟ್ರಿಕ್ ಗೆಲುವು ಸಾಧಿಸಿದ್ದರು. ಆದರೆ ಇದೀಗ ಏಕಾಏಕಿ ರಾಜಕೀಯಕ್ಕೆ ವಿದಾಯ ಘೋಷಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಅಚ್ಚರಿಗೆ ಕಾರಣವಾಗಿದೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ