ಬೆಂಗಳೂರು: ರಾಜ್ಯಾದ್ಯಂತ ಬಾಡಿಗೆದಾರರು ಸೇರಿದಂತೆ ಎಲ್ಲರಿಗೂ 200 ಯುನಿಟ್ ಒಳಗೆ ಬಳಸಿದರೆ ವಿದ್ಯುತ್ ಉಚಿತ. ಆದರೆ ವಾಣಿಜ್ಯ ಉದ್ದೇಶಕ್ಕೆ ವಿದ್ಯುತ್ ಬಳಸುವವರಿಗೆ ಈ ನಿಯಮ ಅನ್ವಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಪುಣ್ಯಸ್ಮರಣೆ ನಿಮಿತ್ತ ವಿಧಾನಸೌಧ ಆವರಣದಲ್ಲಿ ಅವರ ಪುತ್ಥಳಿಗೆ ಗೌರವ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರಿಗೆ ಮಂಗಳವಾರ ಪ್ರತಿಕ್ರಿಯಿಸಿದ ಅವರು, ಈಗಾಗಲೇ ತಿಳಿಸಿರುವಂತೆ ವಾರ್ಷಿಕ ಸರಾಸರಿಗೆ ಶೇಕಡ 10 ಹೆಚ್ಚುವರಿ ಲೆಕ್ಕಾಚಾರದಲ್ಲಿ 200 ಯುನಿಟ್ ಒಳಗೆ ಬಳಸಿದ ಎಲ್ಲರಿಗೂ ಉಚಿತ ವಿದ್ಯುತ್ ಲಭಿಸಲಿದೆ. ಬಾಡಿಗೆ ಮನೆಯಲ್ಲಿ ಇರುವವರಿಗೂ ಈ ಸೌಲಭ್ಯ ಲಭಿಸಲಿದ್ದು, ವಾಣಿಜ್ಯಿಕ ಉದ್ದೇಶಿತ ಬಳಕೆಗೆ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ.
ಬಿಜೆಪಿಯವರಿಗೆ ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಬಿಜೆಪಿಯವರು ಕೊಟ್ಟ ಭರವಸೆಗಳನ್ನ ಈಡೇರಿಸಿದ್ದಾರಾ ಎಂದು ಪ್ರಶ್ನಿಸಿದ ಸಿದ್ಧರಾಮಯ್ಯ, ಬಿಜೆಪಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ. ನೀರಾವರಿ ಯೋಜನೆಗೆ 1 ಲಕ್ಷ ಕೋಟಿ ಕೊಡುತ್ತೇವೆ ಎಂದು ಹೇಳಿದ್ದರು. ಆದರೆ ಕೊಟ್ಟಿಲ್ಲ. ರೈತರ ಸಾಲಮನ್ನಾ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು ? ಆದರೆ ನೀಡಿಲ್ಲ. ಅವರು ಅಧಿಕಾರದಲ್ಲಿದ್ದಾಗ ಲೂಟಿ ಮಾಡಿದರು ಎಂದು ಲೇವಡಿ ಮಾಡಿದರು.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ