ರಾಜ್ಯದ ವಿಧಾನ ಪರಿಷತ್ತಿನ 3 ಸ್ಥಾನಗಳಿಗೆ ಉಪ ಚುನಾವಣೆ ದಿನಾಂಕ ಪ್ರಕಟ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಬೆನ್ನಲ್ಲೇ, ಚುನಾವಣಾ ಆಯೋಗ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ ಮಾಡಿದೆ. ಜೂನ್ 30ರಂದು ಚುನಾವಣೆ ನಡೆಸಲಾಗುತ್ತಿದೆ.
ಇಂದು, ಸೋಮವಾರ ಕೇಂದ್ರ ಚುನಾವಣಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದೆ. ಬಾಬುರಾವ್ ಚಿಂಚನಸೂರು, ಆರ್ ಶಂಕರ ಹಾಗೂ ಲಕ್ಷ್ಮಣ ಸವದಿ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಈ ಮೂರು ಸ್ಥಾನಗಳು ತೆರವಾಗಿದ್ದವು.
ಈ ಮೂರು ವಿಧಾನಪರಿಷತ್ತಿನ ಸ್ಥಾನಗಳಿಗೆ ಉಪ ಚುನಾವಣೆ ಜೂನ್ 30ರಂದು ನಡೆಯಲಿದೆ. ಜೂನ್‌ 13ರಂದು ನೋಟಿಫಿಕೇಶನ್‌ ಹೊರ ಬೀಳಲಿದೆ. ಜೂನ್‌ 20ರಂದು ನಾಮಪತ್ರವನ್ನು ಸಲ್ಲಿಸಲು ಕೊನೆಯ ದಿನ. ಜೂನ್‌ 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂನ್‌ 23 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್‌ 30ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಸಂಜೆ 5ಕ್ಕೆ ಫಲಿತಾಂಶ ಘೋಷಣೆ ಆಗಲಿದೆ. ಜುಲೈ 4ರಂದು ಉಪ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

ಇಂದಿನ ಪ್ರಮುಖ ಸುದ್ದಿ :-   ಹೈದರಾಬಾದ್-ಬೆಂಗಳೂರು ವಂದೇ ಭಾರತ ರೈಲು ಸೆಪ್ಟೆಂಬರ್ 25 ರಿಂದ ಆರಂಭ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement