ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಅಕ್ರಮದ ಬಗ್ಗೆ ತನಿಖೆಗೆ ಸಿಎಂ ಸೂಚನೆ

ಬೆಂಗಳೂರು : ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಈ ಕುರಿತು ಮಂಗಳವಾರ ಟಿಪ್ಪಣಿ ಹೊರಡಿಸಿರುವ ಅವರು, “ದಿನಾಂಕ 23-7-2022 ಮತ್ತು 24-7-2022 ರಂದು ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರ ಅಕ್ರಮಗಳು ನಡೆದಿರುವುದಾಗಿ ವ್ಯಾಪಕವಾದ ದೂರುಗಳು ಬಂದಿವೆ. ಈ ಬಗ್ಗೆ ತಕ್ಷಣವೇ ಇಲಾಖೆ ತನಿಖೆ ತಪ್ಪಿತಸ್ಥರ ವಿವರಗಳೊಂದಿಗೆ 10 ದಿನದಲ್ಲಿ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement