ಒಡಿಶಾ ರೈಲು ಅಪಘಾತ : 101 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ

ಭುವನೇಶ್ವರ : ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿರುವ 101 ಮೃತದೇಹಗಳನ್ನು ಈವರೆಗೂ ಗುರುತಿಸಲು ಸಾಧ್ಯವಾಗಿಲ್ಲ.
101 ಮೃತದೇಹಗಳನ್ನು ನಾವು ಇದುವರೆಗೂ ಗುರುತಿಸಲು ಸಾಧ್ಯವಾಗಿಲ್ಲ. ಇದರ ಜೊತೆಗೆ ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ 200ಕ್ಕೂ ಹೆಚ್ಚು ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಈಸ್ಟರ್ನ್ ಸೆಂಟ್ರಲ್ ರೈಲ್ವೇ ವಿಭಾಗೀಯ ಮ್ಯಾನೇಜರ್ ರಿಂಕೇಶ ರಾಯ್ ಅವರು ತಿಳಿಸಿದ್ದಾರೆ.
ಅಪಘಾತದಲ್ಲಿ ಸುಮಾರು 1,100 ಜನರು ಗಾಯಗೊಂಡಿದ್ದಾರೆ, ಅದರಲ್ಲಿ ಸುಮಾರು 900 ಜನರನ್ನು ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ. ಸುಮಾರು 200 ಜನರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಮೃತಪಟ್ಟ 278 ಜನರಲ್ಲಿ 101 ಮೃತದೇಹಗಳನ್ನು ಈವರೆಗೆ ಗುರುತಿಸಲು ಸಾಧ್ಯವಾಗಿಲ್ಲ. ಆದಷ್ಟು ಶೀಘ್ರ ವಾರಸುದಾರರನ್ನು ಪತ್ತೆ ಹಚ್ಚಿ ಮೃತದೇಹಗಳನ್ನು ಅವರಿಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಭುವನೇಶ್ವರದಲ್ಲಿ ಇರಿಸಲಾಗಿರುವ ಒಟ್ಟು 193 ಶವಗಳಲ್ಲಿ 80 ಶವಗಳನ್ನು ಗುರುತಿಸಲಾಗಿದೆ. 55 ಶವಗಳನ್ನು ಹಸ್ತಾಂತರಿಸಲಾಗಿದೆ. ಬಿಎಂಸಿಯ 1929 ಸಹಾಯವಾಣಿ ಸಂಖ್ಯೆಗೆ 200 ಕ್ಕೂ ಹೆಚ್ಚು ಕರೆಗಳು ಬಂದಿವೆ ಎಂದು ಭುವನೇಶ್ವರ ಮುನ್ಸಿಪಲ್ ಕಾಪೆರ್ರೇಶನ್‍ನ ಆಯುಕ್ತ ವಿಜಯ್ ಅಮೃತ್ ಕುಲಂ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ತಾಯಿಯ ಸಂಪತ್ತು ಉಳಿಸಿಕೊಳ್ಳಲು ಪಿತ್ರಾರ್ಜಿತ ತೆರಿಗೆ ಕಾನೂನು ರದ್ದುಗೊಳಿಸಿದ ರಾಜೀವ ಗಾಂಧಿ : ಪ್ರಧಾನಿ ಮೋದಿ ಆರೋಪ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement