ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಬಗ್ಗೆ ಯಾವುದೇ ಪ್ರಸ್ತಾವ ಬಂದಿಲ್ಲ : ಕಾನೂನು ಸಚಿವ ಹೆಚ್.ಕೆ.ಪಾಟೀಲ

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಕಾನೂನು ಇಲಾಖೆ ಮುಂದೆ ಸದ್ಯಕ್ಕೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈವರೆಗೆ ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಬಗ್ಗೆ ಇಲಾಖೆಗೆ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದರು.
ಬಜೆಟ್ ಅಧಿವೇಶನದ ದಿನಾಂಕದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆ ಮಾಡಲಾಗುವುದು. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿ ನಿರ್ಧಾರ ಆಗಬಹುದು ಎಂದು ಹೇಳಿದ್ದಾರೆ.
ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವ ಬಗ್ಗೆ ಆಡಳಿತ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಮಾತಿನ ಜಟಾಪಟಿ ನಡೆದಿದೆ. ಈ ಮಧ್ಯೆ ಕಾಯ್ದೆ ವಾಪಸ್ ಪಡೆಯುವ ಅಥವಾ ಅದರಲ್ಲಿನ ಅಂಶಗಳನ್ನು ಸಡಿಲಗೊಳಿಸುವ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement