ಬಾಡಿಗೆದಾರರಿಗೂ 200 ಯುನಿಟ್ ವಿದ್ಯುತ್​ ಉಚಿತ: ಗೊಂದಲಕ್ಕೆ ತೆರೆ ಎಳೆದ ಇಂಧನ ಸಚಿವ ಕೆ.ಜೆ. ಜಾರ್ಜ್​

ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ, ಬಾಡಿಗೆ ಮನೆಗಳಲ್ಲಿ ವಾಸಿಸುವವರು ಕೂಡ ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಅರ್ಹರಾಗಿರುತ್ತಾರೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದು, ಈ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಬಾಡಿಗೆದಾರರಿಗೂ ಉಚಿತವಾಗಿ 200 ಯುನಿಟ್​ ವಿದ್ಯುತ್ ದೊರೆಯುತ್ತದೆ.​ ಆದರೆ, ಬಾಡಿಗೆದಾರರು ಅರ್ಜಿ ಸಲ್ಲಿಸುವಾಗ ಸೂಕ್ತ ದಾಖಲೆಗಳು ಇರಬೇಕು ಎಂದು ತಿಳಿಸಿದ್ದಾರೆ.
ಬಾಡಿಗೆದಾರರು ಅರ್ಜಿ ಸಲ್ಲಿಸುವಾಗ ಸಂಪೂರ್ಣ ದಾಖಲೆಗಳನ್ನು ನೀಡಬೇಕು. ಎಷ್ಟು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ ಎಂಬ ದಾಖಲೆ ನೀಡಬೇಕಾಗುತ್ತದೆ. ಹಾಗೂ ವಿದ್ಯುತ್​​ ಬಿಲ್​ ಮತ್ತು ಬಾಡಿಗೆ ಕರಾರು ಪತ್ರವನ್ನು ಅರ್ಜಿಯ ಜತೆಗೆ ಕೊಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಮಾಲೀಕ ಎಷ್ಟು ಬಾಡಿಗೆ ಮನೆ ಇದೆ ಎಂದು ಘೋಷಿಸಬೇಕು ಹಾಗೂ ಮನೆ ಮಾಲೀಕ ಕಡ್ಡಾಯವಾಗಿ ತೆರಿಗೆ ಕಟ್ಟಿರಬೇಕು. ಇಷ್ಟು ಬಾಡಿಗೆ ಮನೆಗಳಿವೆ, ಇಷ್ಟು ಮನೆಗಳಿಗೆ ನಾನು ಟ್ಯಾಕ್ಸ್ ಕಟ್ಟಿದ್ದೇನೆ ಎಂದು ಮಾಹಿತಿ ನೀಡಬೇಕು. ಒಂದು ವೇಳೆ ತಪ್ಪು ಮಾಹಿತಿ ನೀಡಿದರೆ ಈ ಯೋಜನೆ ಅನ್ವಯವಾಗುವುದಿಲ್ಲ ಎಂದ ಅವರು ಬಾಡಿಗೆಗಾರರಿಗೆ ಉಚಿತ ವಿದ್ಯುತ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ನಾಲ್ಕು ಗ್ಯಾರಂಟಿಗಳಿಗೆ ಆದೇಶ ಹೊರಡಿಸಿದೆ. ಈ ಯೋಜನೆಗಳಿಗೆ ಸರ್ಕಾರ ಹೊರಡಿಸಿದ ಮಾರ್ಗಸೂಚಿಯಲ್ಲಿ ಹಲವು ಷರತ್ತುಗಳನ್ನು ವಿಧಿಸಲಾಗಿದೆ. ಶಕ್ತಿ ಯೋಜನೆ ಗ್ಯಾರಂಟಿಯಲ್ಲಿ ಉಚಿತ ವಿದ್ಯುತ್ ಯೋಜನೆ ಸೌಲಭ್ಯ ದೊರೆಯಲಿದೆ. ಇದರ ಪ್ರಯೋಜನ ಪಡೆಯಲು ಬಯಸುವ ಗ್ರಾಹಕರು ‘ಸೇವಾ ಸಿಂಧು’ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement