ಔರಂಗಜೇಬ್, ಟಿಪ್ಪು ಸುಲ್ತಾನ್ ಕುರಿತ ಸಾಮಾಜಿಕ ಮಾಧ್ಯಮದ ಪೋಸ್ಟ್‌ ನಿಂದ ಕೊಲ್ಲಾಪುರ ಉದ್ವಿಗ್ನ , ಲಾಠಿ ಚಾರ್ಜ್‌

ಕೊಲ್ಲಾಪುರ: ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹಾಕಲಾದ ವಿವಾದಾತ್ಮಕ ಪೋಸ್ಟ್‌ಗಳನ್ನು ವಿರೋಧಿಸಿ ಕೆಲ ಸಂಘಟನೆಗಳು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಇಂದು, ಬುಧವಾರ ಬೆಳಿಗ್ಗೆ ಬೃಹತ್ ಪ್ರತಿಭಟನೆ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂದ್‌ಗೆ ಕರೆ ನೀಡಿದ್ದ ಪ್ರತಿಭಟನಾಕಾರರು ಕೊಲ್ಲಾಪುರದ ಛತ್ರಪತಿ ಶಿವಾಜಿ ಮಹಾರಾಜ್ ಚೌಕದಲ್ಲಿ ಕೆಲವು ಅಂಗಡಿಗಳು ಮತ್ತು ವಾಹನಗಳಿಗೆ ಹಾನಿ ಮಾಡಿದ ನಂತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು. ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಇಬ್ಬರು ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.
ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಟ್ಟಣದ ಇತರೆಡೆಯಿಂದಲೂ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಬಗ್ಗೆ ವರದಿಯಾಗಿದೆ.
“ಕೆಲವು ಸಂಘಟನೆಗಳು ಕೊಲ್ಲಾಪುರ ಬಂದ್‌ಗೆ ಕರೆ ನೀಡಿದ್ದವು ಮತ್ತು ಈ ಸಂಘಟನೆಗಳ ಸದಸ್ಯರು ಇಂದು, ಬುಧವಾರ ಶಿವಾಜಿ ಚೌಕದಲ್ಲಿ ಜಮಾಯಿಸಿದರು. ಕೆಲವರು ಕಲ್ಲು ತೂರಾಟ ನಡೆಸಿದರು, ಈ ಜನರನ್ನು ಚದುರಿಸಲು ಪೊಲೀಸರ ಮೇಲೆ ಬಲಪ್ರಯೋಗ ಮಾಡಬೇಕಾಯಿತು ಎಂದು ಕೊಲ್ಲಾಪುರದ ಪೊಲೀಸ್ ವರಿಷ್ಠಾಧಿಕಾರಿ ಮಹೇಂದ್ರ ಪಂಡಿತ ಹೇಳಿದರು. .

ಪ್ರಮುಖ ಸುದ್ದಿ :-   ವಿದೇಶೀ ವಿನಿಮಯ ಸಂಗ್ರಹ : 700 ಶತಕೋಟಿ ಡಾಲರ್ ದಾಟಿದ ವಿಶ್ವದ 4ನೇ ರಾಷ್ಟ್ರವಾದ ಭಾರತ...

ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಿಳಿಸಿದ್ದಾರೆ. ಅಲ್ಲದೆ ಸಾರ್ವಜನಿಕರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ‘ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಹೇಳಿದರು.

https://twitter.com/ANI/status/1666344992049364993?ref_src=twsrc%5Etfw%7Ctwcamp%5Etweetembed%7Ctwterm%5E1666344992049364993%7Ctwgr%5Eef762509231ac58bdd0bee3fd0dd1be158cd4607%7Ctwcon%5Es1_&ref_url=https%3A%2F%2Fenglish.jagran.com%2Fmaharashtra%2Fpune%2Fmumbai-clash-breaks-out-between-two-groups-during-protest-in-kolhapur-cm-shinde-appeals-for-peace-10081523

ಗೃಹ ಖಾತೆಯನ್ನು ಹೊಂದಿರುವ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಔರಂಗಜೇಬ್ ಅವರನ್ನು ಹೊಗಳಿದವರಿಗೆ ಮಹಾರಾಷ್ಟ್ರದಲ್ಲಿ ಕ್ಷಮೆ ಇಲ್ಲ. ಪೊಲೀಸರು ಸಹ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಅದೇ ಸಮಯದಲ್ಲಿ, ಶಾಂತಿಯನ್ನು ಕಾಪಾಡುವುದನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಸಾಮೂಹಿಕ ಜವಾಬ್ದಾರಿಯಾಗಿದೆ” ಎಂದು ಫಡ್ನವೀಸ್ ಹೇಳಿದ್ದಾರೆ.
ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

4.3 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement