ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್: ಡಿನೋಟಿಫಿಕೇಶನ್‌ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲಿದ್ದ ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣವನ್ನು ಹೈಕೋರ್ಟ್‌ ರದ್ದುಗೊಳಿಸಿದೆ. ಯಡಿಯೂರಪ್ಪ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.
ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಲಾಗಿದೆ ಎಂದು ಕಳೆದ 8 ವರ್ಷಗಳ ಹಿಂದೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಸಾಮಾಜಿಕ ಕಾರ್ಯಕರ್ತ ಜಯಕುಮಾರ ಹಿರೇಮಠ ದೂರು ದಾಖಲಿಸಿದ್ದರು. (yediyurappa-denotification )
ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದ ಜಯಕುಮಾರ ಹಿರೇಮಠ ಅವರು, ಯಡಿಯೂರಪ್ಪ ಅವರು ತಮ್ಮ ಮುಖ್ಯಮಂತ್ರಿಯ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಹಲಗೇವಡೇರಹಳ್ಳಿ ಮತ್ತು ಬಿಳೇಕಹಳ್ಳಿಯಲ್ಲಿ ಅಕ್ರಮ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದರು. ಅಕ್ರಮ ಡಿನೋಟಿಫಿಕೇಷನ್ ಬಗ್ಗೆ ಸಿಎಜಿ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದರು. ಈ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಸಂಸ್ಥೆಯು 2015 ರಲ್ಲಿ ಯಡಿಯೂರಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು.
ಲೋಕಾಯುಕ್ತದಲ್ಲಿ ದಾಖಲಾದ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಈಗ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣ ಹೈಕೋರ್ಟ್ ನಲ್ಲಿ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಆದೇಶ ಹೊರಡಿಸಲಾಗಿದೆ. ಇದರಿಂದಾಗಿ ಕಳೆದ 8 ವರ್ಷದ ಹಿಂದಿನ ಪ್ರಕರಣದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಪ್ರಮುಖ ಸುದ್ದಿ :-   ಎಚ್.ಡಿ ರೇವಣ್ಣ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement