ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ : 2000 ರೂ. ಪಡೆಯಲು ಯಾವ್ಯಾವ ದಾಖಲೆ ಕೊಡಬೇಕು? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರವು ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬಿಡಗಡೆ ಮಾಡಿದೆ.
ಭೌತಿಕ ಅರ್ಜಿ ಸಲ್ಲಿಕೆ ಮಾಡುವುದರ ಬಗ್ಗೆ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದ್ದು, ಅರ್ಜಿ ನಮೂನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾವಚಿತ್ರವಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಲಕ್ಷ್ಮಿ ಯೋಜನೆಯ ಮೂಲಕ ಮುಂದಿನ ಐದು ವರ್ಷಗಳ ಕಾಲ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ಜಮೆ ಮಾಡಲಾಗುವುದು ಎಂದು ಈಗಾಗಲೇ ಪ್ರಕಟಿಸಿದ್ದಾರೆ. ಮುಂದಿನ ಆಗಸ್ಟ್​ 15ರಿಂದ ಪ್ರತಿ ತಿಂಗಳು ಬಿಪಿಎಲ್ ಹಾಗೂ ಎಪಿಎಲ್ ಕುಟುಂಬಗಳ ಮನೆ ಒಡತಿಯ ಖಾತೆಗೆ 2000 ರೂಪಾಯಿ ಹಣ ವರ್ಗಾವಣೆಯಾಗಲಿದೆ ಎಂದು ಹೇಳಿದ್ದಾರೆ.
ಈಗಾಗಲೇ ಯೋಜನೆಯ ಫಲಾನುಭವಿಯಾಗಲು ಅರ್ಜಿ ಸಲ್ಲಿಸುವ ಮೊದಲು ಮನೆ ಯಜಮಾನಿ ಯಾರೆಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಅವರಲ್ಲಿ ಬ್ಯಾಂಕ್ ಖಾತೆ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಇರಬೇಕು ಎಂದು ತಿಳಿಸಲಾಗಿದೆ.

ಅರ್ಜಿಯಲ್ಲಿ ಮೊದಲಿಗೆ ಹೆಸರು, ಆಧಾರ್ ಕಾರ್ಡ್, ವೋಟರ್ ಐಡಿ, ಪಡಿತರ ಚೀಟಿ, ಉದ್ಯೋಗ, ಪತಿಯ ಹೆಸರು, ಪತಿಯ ಆಧಾರ್ ಹಾಗೂ ವೋಟರ್ ಐಡಿ ಮುಂತಾದ ಮಾಹಿತಿಯನ್ನು ಕೇಳಲಾಗಿದೆ. ಅದರೊಂದಿಗೆ ಜಾತಿ, ಆಧಾರ್ ಜತೆ ಲಿಂಕ್ ಆಗಿರುವ ಮೊಬೈಲ್ ನಂ. ಬ್ಯಾಂಕ್ ಖಾತೆ ಮಾಹಿತಿಯನ್ನು ನಮೂದಿಸಬೇಕಾಗುತ್ತದೆ.
ಅರ್ಜಿ ತುಂಬಿ ಜತೆಗೆ, ಮನೆ ಯಜಮಾನಿ ಹಾಗೂ ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ವೋಟರ್ ಐಡಿ ಪ್ರತಿಯನ್ನು ಲಗತ್ತಿಸಬೇಕು. ಅದರೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯನ್ನೂ ಲಗತ್ತಿಸಬೇಕು. ಕೊನೆಯಲ್ಲಿ ಸ್ವಯಂ ಘೋಷಣೆ ಒಂದಕ್ಕೆ ಸಹಿ ಹಾಕಬೇಕಾಗಿದ್ದು, ಅದರಲ್ಲಿ ಮನೆಯೊಡತಿ, ‘ನಾನು ಮತ್ತು ನನ್ನ ಗಂಡ ಅದಾಯ ತೆರಿಗೆ/ ಜಿಎಸ್‌ಟಿ ಪಾವತಿದಾರರಾಗಿರುವುದಿಲ್ಲ. ನಾನು ಒದಗಿಸಿರುವ ಎಲ್ಲಾ ವಿವರಗಳು ನನ್ನ ತಿಳುವಳಿಕೆಯಂತೆ ಸಮರ್ಪಕವಾಗಿದೆ.
ನನ್ನ ಕುಟುಂಬ ಮನೆಯಲ್ಲಿ ನಾನೇ ಮನೆ ಒಡತಿಯಾಗಿರುತ್ತೇನೆ. ನಾನು ಒದಗಿಸಿರುವ ಮಾಹಿತಿ ಸುಳ್ಳೆಂದು ಕಂಡು ಬಂದರೆ ಕಾನೂನಿನ ಕ್ರಮಕ್ಕೆ ಒಳಗಾಗಲು ಹಾಗೂ ನಾನು ಪಡೆದ ಗೃಹಲಕ್ಷ್ಮೀ ಯೋಜನೆ ಸೌಲಭ್ಯವನ್ನು ಸರ್ಕಾರಕ್ಕೆ ಮರುಪಾವತಿಸಲು ಬದ್ಧಳಾಗಿರುತ್ತೇನೆ ಎಂಬ ಹೇಳಿಕೆಯನ್ನು ಒಪ್ಪಿ ಸಹಿ ಹಾಕಬೇಕಾಗುತ್ತದೆ.
ಇದೇ ಮಾಹಿತಿಯನ್ನು ಆನ್ಲೈನ್ ಮೂಲಕ ಸಲ್ಲಿಸಿಯೂ ಯೋಜನೆಯ ಫಲಾನುಭವಿಗಳಾಗಬಹುದು. ಅದಕ್ಕೆ ಸಂಬಂಧಿಸಿದ ಅಧಿಕೃತ ವೆಬ್ಸೈಟ್ ಬಿಡುಗಡೆ ಆಗಲಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement