ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ ) ಅಧ್ಯಕ್ಷರನ್ನಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳಿಂದ ತೀವ್ರ ಪೈಪೋಟಿ ಎದುರಾದ ಹಿನ್ನೆಲೆಯಲ್ಲಿ ಸರ್ಕಾರ ಐಎಎಸ್ ಅಧಿಕಾರಿಯನ್ನು ನೇಮಕ ಮಾಡಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಈ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ಕಾಂಗ್ರೆಸ್ನ ಕೆಲ ಶಾಸಕರಿಗೆ ಭಾರೀ ನಿರಾಸೆಯಾಗಿದೆ.
ಕಾಂಗ್ರೆಸ್ಸಿನ ಹಲವು ಶಾಸಕರಿಂದ ಈ ಹುದ್ದೆಗೆ ತೀವ್ರ ಪೈಪೋಟಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ರಾಜಕಾರಣಿಗಳಿಗೆ ಮಣೆಹಾಕದೆ ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಐಎಎಸ್ (IAS) ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಿಸಿದೆ.
ಬಿಡಿಎ ಸೇರಿದಂತೆ ರಾಮನಗರ ಹಾಗೂ ಗ್ರಾಮಾಂತರ ಮತ್ತು ಕರ್ನಾಟಕದ ಒಟ್ಟು 10 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರಾಗಿ ರಾಖೇಶ್ ಸಿಂಗ್ ಅವರನ್ನು ನೇಮಕ ಮಾಡಿದೆ.
1. ಆನೇಕಲ್ ಯೋಜನಾ ಪ್ರಾಧಿಕಾರ
2. ಹೊಸಕೋಟೆ ಯೋಜನಾ ಪ್ರಾಧಿಕಾರ
3. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ
4. ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ
5. ಮಾಗಡಿ ಯೋಜನಾ ಪ್ರಾಧಿಕಾರ
6. ಚನ್ನಪಟ್ಟಣ ಯೋಜನಾ ಪ್ರಾಧಿಕಾರ
7. ಕನಕಪುರ ಯೋಜನಾ ಪ್ರಾಧಿಕಾರ
8. ನೆಲಮಂಗಲ ಯೋಜನಾ ಪ್ರಾಧಿಕಾರ
9. ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ
10. ಗ್ರೇಟರ್ ಬೆಂಗಳೂರು-ಬಿಡದಿ ಸ್ಮಾರ್ಟ್ ಸಿಟಿ ಯೋಜನಾ ಪ್ರಾಧಿಕಾರ
ಹೀಗೆ 10 ಯೋಜನಾ ಪ್ರಾಧಿಕಾರಿಗಳಿಗೆ ರಾಕೇಶ ಸಿಂಗ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಬಿಡಿಎ ಹಾಗೂ ಇತರೆ ಯೋಜನಾ ಪ್ರಾಧಿಕಾರ ಅಧ್ಯಕ್ಷರ ಹುದ್ದೆಗೆ ಆಡಳಿತ ಪಕ್ಷದ ನಾಯಕರನ್ನು ನೇಮಕ ಮಾಡುವುದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಆದರೆ ಅಚ್ಚರಿ ಬೆಳವಣಿಗೆಯಲ್ಲಿ ಸರ್ಕಾರ ಪಕ್ಷದ ನಾಯಕರನ್ನು ಬಿಟ್ಟು ಐಎಎಸ್ ಅಧಿಕಾರಿಯನ್ನು ನೇಮಕ ಮಾಡಿ ಹಲವರಿಗೆ ನಿರಾಸೆ ಮೂಡಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ