ಶಾಕಿಂಗ್‌.. : ಲಿವ್‌ ಇನ್‌ ಪಾರ್ಟ್ನರಳನ್ನು ಕೊಂದು, ಮರ ಕತ್ತರಿಸುವ ಕಟರ್‌ ನಿಂದ ದೇಹ ತುಂಡು ಮಾಡಿ ಕುಕ್ಕರ್‌ನಲ್ಲಿ ಕುದಿಸಿದ ವ್ಯಕ್ತಿ…!

ಮುಂಬೈ : ಮುಂಬೈನ ಮೀರಾ ರೋಡ್‌ನಲ್ಲಿರುವ ತನ್ನ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ 56 ವರ್ಷದ ವ್ಯಕ್ತಿಯನ್ನು ತನ್ನ ಲಿವ್-ಇನ್ ಸಂಬಂಧದಲ್ಲಿದ್ದ ಮಹಿಳೆಯನ್ನು ಕೊಂದು ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಆ ವ್ಯಕ್ತಿ ತನ್ನ ಸಂಗಾತಿಯ ದೇಹವನ್ನು ಮರ ಕಡಿಯುವ ಕಟರ್‌ನಿಂದ ಕತ್ತರಿಸಿದ್ದಾನೆ ಮತ್ತು ಆಕೆಯ ದೇಹದ ಭಾಗಗಳನ್ನು ಕುಕ್ಕರ್‌ನಲ್ಲಿ ಬೇಯಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿಯನ್ನು ಮನೋಜ್ ಸಹಾನಿ ಎಂದು ಗುರುತಿಸಲಾಗಿದ್ದು, ಕಳೆದ ಮೂರು ವರ್ಷಗಳಿಂದ ಗೀತಾ ನಗರ 7 ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ 704 ಫ್ಲಾಟ್‌ನಲ್ಲಿ ಸರಸ್ವತಿ ವೈದ್ಯ (36) ಎಂಬುವವರೊಂದಿಗೆ ವಾಸವಾಗಿದ್ದ. ಫ್ಲಾಟ್‌ನಿಂದ ದುರ್ವಾಸನೆ ಬರುತ್ತಿದ್ದರಿಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮನೋಜ್ ಬೋರಿವಾಲಿಯಲ್ಲಿ ಸಣ್ಣ ಅಂಗಡಿ ನಡೆಸುತ್ತಿದ್ದಾನೆ.
ಫ್ಲಾಟ್‌ನಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ಬುಧವಾರ ಸಂಜೆ ಕಟ್ಟಡದ ನಿವಾಸಿಗಳಿಂದ ನಯಾನಗರ ಠಾಣೆಗೆ ಕರೆ ಬಂದಿತ್ತು.
ಅವರ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ದೇಹದ ಭಾಗಗಳಿಂದಾಗಿ ಮೂರ್ನಾಲ್ಕು ದಿನಗಳ ಹಿಂದೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾವಿಸಿದ ತಂಡವು ಮಹಿಳೆಯ ಕೊಳೆತ ದೇಹವನ್ನು ಕಂಡುಹಿಡಿದಿದೆ, ಅದು ಹಲವಾರು ತುಂಡುಗಳಾಗಿ ಕತ್ತರಿಸಲ್ಪಟ್ಟಿದೆ.

ಪ್ರಮುಖ ಸುದ್ದಿ :-   ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್‌ ನಟ ಗೋವಿಂದ : 14 ವರ್ಷಗಳ ವನವಾಸದ ನಂತರ ರಾಜಕೀಯಕ್ಕೆ

ಮನೋಜ ಸಹಾನಿ ಮತ್ತು ಸರಸ್ವತಿ ವೈದ್ಯ ಲಿವ್-ಇನ್ ಸಂಬಂಧದಲ್ಲಿದ್ದರು ಮತ್ತು ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ ವಾಸಿಸುತ್ತಿದ್ದರು. ಕೆಲವು ವಿಷಯಕ್ಕೆ ಇಬ್ಬರ ಜಗಳವಾಗಿದೆ, ನಂತರ ಮಹಿಳೆಯನ್ನು ಆಕೆಯ ಸಂಗಾತಿ ಕೊಲೆ ಮಾಡಿದ್ದಾನೆ. ಆಕೆಯ ದೇಹವನ್ನು ಕಟರ್‌ನಿಂದ ತುಂಡುಗಳಾಗಿ ಕತ್ತರಿಸಲಾಗಿತ್ತು ಪೊಲೀಸರು ತಿಳಿಸಿದ್ದಾರೆ.
ಕೊಲೆಯ ಹಿಂದಿನ ಉದ್ದೇಶವನ್ನು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕಳೆದ ವರ್ಷ ಮೇ ತಿಂಗಳಲ್ಲಿ, ಆಫ್ತಾಬ್ ಪೂನಾವಾಲಾ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ತನ್ನ ಲಿವ್-ಇನ್-ಪಾರ್ಟ್‌ನರ್ ಶ್ರದ್ಧಾ ವಾಕರ್‌ನನ್ನು ಹತ್ಯೆ ಮಾಡಿದ್ದ. ಅವನು ಅವಳ ದೇಹವನ್ನು ತುಂಡುಗಳಾಗಿ ಕತ್ತರಿಸಿ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ತನ್ನ ಮನೆಯಲ್ಲಿ ಸುಮಾರು ಮೂರು ವಾರಗಳ ಕಾಲ ಫ್ರಿಜ್‌ನಲ್ಲಿ ಇರಿಸಿದ್ದ ಮತ್ತು ರಾಜಧಾನಿಯ ವಿವಿಧ ಸ್ಥಳಗಳಲ್ಲಿ ಅವುಗಳನ್ನು ಎಸೆದಿದ್ದ.
ದೆಹಲಿ ಪೊಲೀಸರು ಜನವರಿ 24 ರಂದು ಪ್ರಕರಣದಲ್ಲಿ 6,629 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದರು. ದೆಹಲಿಯ ಸಾಕೇತ್ ನ್ಯಾಯಾಲಯವು ಅಫ್ತಾಬ್ ಪೂನಾವಾಲಾ ವಿರುದ್ಧ ಆರೋಪಗಳನ್ನು ರೂಪಿಸಿದೆ.

ಪ್ರಮುಖ ಸುದ್ದಿ :-   ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement