ಬೆಂಗಳೂರು : ಸರಳ ಸಮಾರಂಭದಲ್ಲಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಪರಕಾಲ ವಾಙ್ಮಯಿ ಅವರು ಬುಧವಾರ ಬೆಂಗಳೂರಿನಲ್ಲಿ ವಿವಾಹವಾದರು. ಮಾಧ್ಯಮ ವರದಿಗಳ ಪ್ರಕಾರ, ಮದುವೆಯಲ್ಲಿ ಆಪ್ತರು ಮತ್ತು ಸಂಬಂಧಿಕರು ಭಾಗವಹಿಸಿದ್ದರು ಮತ್ತು ಯಾವುದೇ ರಾಜಕೀಯ ನಾಯಕರನ್ನು ಆಹ್ವಾನಿಸಲಾಗಿಲ್ಲ.
ಪ್ರತೀಕ್ ಅವರೊಂದಿಗೆ ವಾಙ್ಮಯಿ ಅವರ ವಿವಾಹವು ಉಡುಪಿ ಅದಮಾರು ಮಠದ ವೈದಿಕ ಕ್ರಮದಲ್ಲಿ ವಿವಾಹ ನಡೆಯಿತು. ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಈಶಪ್ರಿಯ ತೀರ್ಥ ಶ್ರೀಪಾದರು ವಧು ವರರನ್ನು ಹರಸಿ ಕಳುಹಿಸಿದ ಮಧುಪರ್ಕ, ಸೀರೆ, ಶಾಲು, ಗಂಧ ಪ್ರಸಾದವನ್ನು ಮಠದ ವ್ಯವಸ್ಥಾಪಕರಾದ ಗೋವಿಂದ ರಾಜರು ಮತ್ತು ಶಿಷ್ಯರು ಮಂತ್ರಘೋಷದ ಮೂಲಕ ನೀಡಿ ಹರಸಿದರು.
ಈಶಪ್ರಿಯ ತೀರ್ಥ ಶ್ರೀಪಾದರು ಅನುಗ್ರಹಿಸಿ ಕಳುಹಿಸಿದ ಉಡುಪಿ ಸೀರೆಯನ್ನು ಪೌರೋಹಿತ್ಯರು ನಿರ್ಮಲಾ ಸೀತಾರಾಮನ್ ಅವರಿಗೆ ನೀಡಿದರು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೊಳಕಾಲ್ಮೂರು ಸೀರೆಯನ್ನು ಉಟ್ಟಿದ್ದರು.
ವಾಙ್ಮಯಿ ಮಿಂಟ್ ಲೌಂಜ್‌ನ ವೈಶಿಷ್ಟ್ಯಗಳ ವಿಭಾಗದ ಪುಸ್ತಕಗಳು ಮತ್ತು ಸಂಸ್ಕೃತಿ ವಿಭಾಗದಲ್ಲಿ ಕೆಲಸ ಮಾಡುತ್ತಾರೆ. ಅವರು ಇದಕ್ಕೂ ಮೊದಲು ದಿ ಹಿಂದೂ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು.
ಅವರು ನಾರ್ತ್ ವೆಸ್ಟರ್ನ್ ಮೆಡಿಲ್ ಸ್ಕೂಲ್ ಆಫ್ ಜರ್ನಲಿಸಂನಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ವಿವಾಹದ ಸಮಯದಲ್ಲಿ, ವೈರಲ್ ವೀಡಿಯೊಗಳ ಪ್ರಕಾರ, ವಾಙ್ಮಯಿ ಗುಲಾಬಿ ಬಣ್ಣದ ಸೀರೆಯನ್ನು ಧರಿಸಿದ್ದರು ಮತ್ತು ಪ್ರತೀಕ್ ಬಿಳಿ ಶಾಲು ಮತ್ತು ಪಂಚೆ ಧರಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ