5ನೇ ಸ್ನಾತಕೋತ್ತರ ಪರೀಕ್ಷೆ ಬರೆದ 81ರ ವೃದ್ಧ….!

ವಿಜಯಪುರ: ಕಲಿಕೆಗೆ ವಯಸ್ಸು ಎಂಬುದಿಲ್ಲ ಎಂಬುದನ್ನು 81 ವರ್ಷದ ಹಿರಿಯ ನಾಗರಿಕರೊಬ್ಬರು ತೋರಿಸಿಕೊಟ್ಟಿದ್ದಾರೆ. ವಿಜಯಪುರ ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಸಂಸ್ಥೆಯ ನರ್ಸಿಂಗ್ ಕಾಲೇಜಿನಲ್ಲಿ ನಡೆಯುತ್ತಿರುವ ಇಗ್ನೋ ಪರೀಕ್ಷೆಯಲ್ಲಿ ನಿಂಗಯ್ಯ ಒಡೆಯರ ಎಂಬವರು ಇಂಗ್ಲಿಷ್‌ ಎಂಎ ಅಂತಿಮ ವರ್ಷದ ಪರೀಕ್ಷೆ ಬರೆಯುವ ಮೂಲಕ ಗಮನ ಸೆಳೆದಿದ್ದಾರೆ.
ನಿಂಗಯ್ಯ ಒಡೆಯರ ಅವರ 5ನೇ ಸ್ನಾತಕೋತ್ತರ ಪರೀಕ್ಷೆ ಇದಾಗಿದ್ದು, ಓದಿನ ಬಗ್ಗೆ ಇರುವ ಅವರಿಗಿರುವ ಅದಮ್ಯ ಪ್ರೀತಿ ಮತ್ತು ಅವರ ಇಚ್ಛಾಶಕ್ತಿ ಇತರರಿಗೆ ಮಾದರಿಯಾಗಿದೆ.
ಸರ್ಕಾರಿ ನೌಕರಿಯಲ್ಲಿದ್ದ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗುಡೂರು ಬಳಿಯ ಎಸ್.ಸಿ.ಹಳ್ಳಿ ಗ್ರಾಮದ ನಿಂಗಯ್ಯ ಒಡೆಯರ ಅವರು ಸೇವಾ ನಿವೃತ್ತಿಯ ನಂತರದಲ್ಲಿ ಶೈಕ್ಷಣಿಕ ಸಾಧನೆಗೆ ಮುಂದಾಗಿದ್ದಾರೆ. ಇವರು ಸೇವಾ ನಿವೃತ್ತಿಯ ಹೊಂದಿದ ಮತ್ತಷ್ಟು ಕಲಿಯಬೇಕು ಎಂಬ ಉತ್ಕಟ ಬಯಕೆಯಿಂದ ಈಗಾಗಲೇ ಕನ್ನಡ, ಹಿಂದಿ ವಿಷಯಗಳಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಲ್ಲದೇ, ಇಗ್ನೋದಿಂದ ಸಮಾಜಶಾಸ್ತ್ರ ಸ್ನಾತಕೋತ್ತರ ಪದವಿಯನ್ನೂ ಇವರು ಪಡೆದಿದ್ದಾರೆ. ಆದರೂ ಇವರಿಗೆ ಇನ್ನೂ ಓದುವ ಮತ್ತು ಪರೀಕ್ಷೆ ಬರೆಯುವ ಹವ್ಯಾಸ ಮಾತ್ರ ಕಡಿಮೆಯಾಗದಿರುವುದು ಗಮನಾರ್ಹವಾಗಿದೆ.

ಪ್ರಮುಖ ಸುದ್ದಿ :-   ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಜುಲೈ 18ರ ವರೆಗೆ ಇಡಿ ಕಸ್ಟಡಿಗೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement