ಮೇಕೆಗೆ ಸೊಪ್ಪು ತರಲು ಹೋಗಿದ್ದ ಅಣ್ಣ-ತಮ್ಮ ನೀರುಪಾಲು

ತುಮಕೂರು: ಮೇಕೆಗೆ ಸೊಪ್ಪು ತರಲು ಹೋಗಿದ್ದ ಅಣ್ಣ ಮತ್ತು ತಮ್ಮ ಇಬ್ಬರು ಬಾವಿಗೆ ಬಿದ್ದು ಸಾವಿಗೀಡಾದ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ದ್ವಾರನಕುಂಟೆಯಲ್ಲಿ ಘಟನೆ ನಡೆದ ವರದಿಯಾಗಿದೆ.
ದ್ವಾರನಕುಂಟೆ ಗ್ರಾಮದ ಪ್ರಸನ್ನ (29) ಹಾಗೂ ಸತೀಶ(25) ಮೃತಪಟ್ಟ ಸಹೋದರರು ಎಂದು ಗುರುತಿಸಲಾಗಿದೆ. ಬಾವಿ ದಡದಲ್ಲಿ ಬೆಳೆದಿದ್ದ ಸೊಪ್ಪು ಕೊಯ್ಯುವಾಗ ಪ್ರಸನ್ನ ಎಂಬವರು ಕಾಲು ಜಾರಿ ಬಾವಿಗೆ ಬಿದ್ದಿದ್ದಾನೆ. ಆತನನ್ನು ರಕ್ಷಿಸಲು ಬಾವಿಗೆ ಇಳಿದ ತಮ್ಮ ಸತೀಶ ಕೂಡ ಜಾರಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಪಟ್ಟನಾಯಕನಹಳ್ಳಿ ಪಿಎಸ್‌ಐ ಭುವಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕುಮಟಾ : ತದಡಿ ಬಳಿ ಪ್ರವಾಸಿಗರ ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ ; 40 ಜನರ ರಕ್ಷಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement