ಧಾರವಾಡ : ರಸ್ತೆ ಅಪಘಾತ ಮೂವರ ಸಾವು

ಧಾರವಾಡ: ಇಂದು, ಭಾನುವಾರ ಬೆಳಿಗಿನ ಜಾವ ಲಾರಿ ಹಾಗೂ ಕಾರ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಮೂವರು ಸಾವಿಗೀಡಾಗಿರುವ ಘಟನೆ ಧಾರವಾಡದ ರಾಷ್ಟ್ರೀಯ ಹೆದ್ದಾರಿ 4ರ ಹಳಿಯಾಳ ಸೇತುವೆ ಬಳಿ ನಡೆದ ವರದಿಯಾಗಿದೆ.
ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದು, ಇನ್ನೋರ್ವ ವ್ಯಕ್ತಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಕೆ.ಆರ್.ನಗರದ ಪುಟ್ಟೇಗೌಡ(33), ಹೊಳೆನರಸಿಪುರದ ದೀಪಕ( 24) ಹಾಗೂ ಹೊಳೆನರಸಿಪುರದ ಚಂದನಗೌಡ (22) ಎನ್ನಲಾಗಿದೆ. ಗಾಯಗೊಂಡ ಇನ್ನೊಬ್ಬನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಧಾರವಾಡ ಗ್ರಾಮೀಣ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಪೊಲೀಸರು  ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement