ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿ ಹೊಡೆದು ಕೆಳಗೆ ನೀರಿಗೆ ಬಿದ್ದು ಓರ್ವ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಸಂಭವಿಸಿದೆ.
ಕಾರಿನಲ್ಲಿದ್ದ ತಮಿಳುನಾಡಿನ ಹೊಸೂರು ಕೃಷ್ಣಗಿರಿ ಮೂಲದ ಹರಿಪ್ರಸಾದ (44) ಎಂಬವರ ಮೃತಪಟ್ಟಿದ್ದು, ಗಾಯಗೊಂಡ ಚಾಲಕ ಗೋಪಿ (45)ಎಂಬವರಿಗೆ ಕಾಲು ಮುರಿದಿದ್ದು ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಕಾರು ಮೇಲೆತ್ತುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ