ಉಡುಪಿ: ಸೀತಾನದಿ ಬಳಿ ಭೀಕರ ಅಪಫಾತ ; ಇಬ್ಬರು ಶಿಕ್ಷಕರು ಸಾವು, ಮತ್ತೊಬ್ಬರು ಗಂಭೀರ

ಉಡುಪಿ: ಖಾಸಗಿ ಬಸ್‌ ಮತ್ತು ಕಾರಿನ ನಡುವೆ ನಡೆದ ಡಿಕ್ಕಿಯಲ್ಲಿ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ–ಆಗುಂಬೆ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದ ಸೋಮೇಶ್ವರದ ಸೀತಾನದಿ ಎಂಬಲ್ಲಿ ಭಾನುವಾರ ಸಂಭವಿಸಿದೆ ಎಂದು ವರದಿಯಾಗಿದೆ.
ಸೀತಾನದಿ ಜಕ್ಕನಮಕ್ಕಿ ಬಳಿ ನಡೆದ ಈ ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ
ಮೃತರನ್ನು ಉಡುಪಿಯ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಸೋಮಶೇಖರ ಎಂದು ಗುರುತಿಸಲಾಗಿದೆ.
ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಶಿಕ್ಷಕ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಂಬುಲೆನ್ಸ್ ಸಿಗದೆ ಇರುವುದನ್ನು ಗಮನಿಸಿದ ಈ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಮೋದ ಎಂಬವರು ನಾಲ್ವರನ್ನು ತನ್ನ ಕಾರಿಗೆ ಹಾಕಿಕೊಂಡು ಬಂದು ಹೆಬ್ರಿ ಸರಕಾರಿ ಆಸ್ಪತ್ರೆ ಸೇರಿಸಿದ್ದಾರೆ.

ಪ್ರಮುಖ ಸುದ್ದಿ :-   ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement