`ಶಕ್ತಿ ಯೋಜನೆ’ಗೆ ಅಧಿಕೃತ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ: ಇಂದು ಮಧ್ಯಾಹ್ನದಿಂದ ರಾಜ್ಯಾದ್ಯಂತ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ

ಬೆಂಗಳೂರು : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ `ಶಕ್ತಿ ಯೋಜನೆ’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.
ಇಂದು, ಭಾನುವಾರ ವಿಧಾನಸೌಧದಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೇವೆ ನೀಡುವ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದು, ಇಂದು (ಜೂನ್‌ ೧೧) ಮಧ್ಯಾಹ್ನ 1 ಗಂಟೆಯಿಂದ ರಾಜ್ಯಾದ್ಯಂತ ಮಹಿಳೆಯರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಶಕ್ತಿ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಶಕ್ತಿ ಯೋಜನೆಯ ಲೋಗೋ ಹಾಗೂ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಅನ್ನು ಬಿಡುಗಡೆ ಮಾಡಿದ್ದಾರೆ. ಬಳಿಕ ಐವರು ಮಹಿಳೆಯರಿಗೆ ಸಾಂಕೇತಿಕವಾಗಿ ಸ್ಮಾರ್ಟ್ ಕಾರ್ಡ್ ವಿತರಿಸಿದ್ದಾರೆ.
ಶಕ್ತಿ ಯೋಜನೆ ಅಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಇಂದು ಮಧ್ಯಾಹ್ನ 1 ಗಂಟೆಯಿಂದ ಅನ್ವಯವಾಗುವಂತೆ ಜಾರಿಗೊಳಿಸಲಾಗುತ್ತಿದೆ. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರು ಕರ್ನಾಟಕ ರಾಜ್ಯದ ನಿವಾಸಿಗಳು ಎಂದು ಪುರಾವೆ ತೋರಿಸಲು ತಮ್ಮ ಮೂಲ ದಾಖಲಾತಿಗಳನ್ನು ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.
ಆಧಾರ್ ಕಾರ್ಡ
ಚುನಾವಣಾ ಆಯೋಗ ವಿತರಿಸಿರುವ ಮತದಾರರ ಗುರುತಿನ ಚೀಟಿ
ಚಾಲನಾ ಪರವಾನಿಗೆ ಪತ್ರ
ಅಲ್ಲದೆ, ವಾಸಸ್ಥಳ ನಮೂದಿಸಿರುವ ಭಾರತ ಸರ್ಕಾರದ ಇಲಾಖೆಗಳು,
ಭಾರತ ಸರ್ಕಾರದ ಸಾರ್ವಜನಿಕ ವಲಯದ ಉದ್ದಿಮೆ, ಸಂಸ್ಥೆಗಳು (ಪಿ.ಎಸ್.ಯು.ಎಸ್) ವಿತರಿಸಿರುವ ಗುರುತಿನ ಚೀಟಿ ಅಥವಾ ವಾಸಸ್ಥಳ ನಮೂದಿಸಿರುವಂತಹ ಕರ್ನಾಟಕ ಸರ್ಕಾರದ ಇಲಾಖೆಗಳು, ಕರ್ನಾಟಕ ಸರ್ಕಾರದ ಸಾರ್ವಜನಿಕ ವಲಯದ ಉದ್ದಿಮೆ, ಸಂಸ್ಥೆಗಳು ವಿತರಿಸಿರುವ ಗುರುತಿನ ಚೀಟಿ,
ಕರ್ನಾಟಕ ಸರ್ಕಾರದ ಅಂಗವಿಕಲರ ಮತ್ತು ಹಿರಿಯ ನಾಗರೀಕ ಕಲ್ಯಾಣ ನಿರ್ದೇಶನಾಲಯದವರು ವಿತರಿಸಿರುವ ಗುರುತಿನ ಚೀಟಿ ಇವುಗಳಲ್ಲಿ ಯಾವುದಾದರು ಒಂದನ್ನು ತೋರಿಸಿ “ಶೂನ್ಯ ಮೊತ್ತದ ಟಿಕೆಟ್’’ ಪಡೆದು ಉಚಿತವಾಗಿ ಪ್ರಯಾಣಿಸಬಹುದು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಚುನಾವಣಾ ಆಯೋಗದಿಂದ 8,889 ಕೋಟಿ ರೂ.ಮೌಲ್ಯದ ವಸ್ತುಗಳ ವಶ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement