ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟೀನ್ ಪ್ರಾರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿರಾ ಕ್ಯಾಂಟೀನ್‌ ನಿರ್ವಹಣೆ ಕುರಿತಂತೆ ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಸಭೆ ನಡೆಸಿದರು.
ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲೇ 175 ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗಿತ್ತು. ಹಾಗೆಯೇ ಹಲವು ಜಿಲ್ಲಾ ಕೇಂದ್ರಗಳಲ್ಲೂ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿತ್ತು. ಸಿದ್ದರಾಮಯ್ಯ ಈಗ ತಮ್ಮ ಸರ್ಕಾರದ ಈ ಯೋಜನೆಗೆ ಈಗ ಮತ್ತೆ ಮರು ಜೀವ ತುಂಬುತ್ತಿದ್ದಾರೆ.
ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇಂದಿರಾ ಕ್ಯಾಂಟೀನ್‌ಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದೆ. ಇಲ್ಲಿಯವರೆಗೆ ಇಂದಿರಾ ಕ್ಯಾಂಟಿನ್ ಗೆ ಬಿಬಿಎಂಪಿ ವತಿಯಿಂದ 70%, ಹಾಗೂ ಸರ್ಕಾರದಿಂದ ಶೇ.30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯು ಶೇ. 50 ರಷ್ಟು ಹಾಗೂ ಸರ್ಕಾರ ಶೇ. 50 ರಷ್ಟು ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
“ಬೆಂಗಳೂರು ಹೊರತು ಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ. 70 ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ. 30 ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ ಎಂದರು.
ಇಂದಿರಾ ಕ್ಯಾಂಟೀನ್ ಆಹಾರ ಕ್ರಮದಲ್ಲಿ ಬದಲಾವಣೆ
ಇಂದಿರಾ ಕ್ಯಾಂಟೀನ್ ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು, ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ದರ ಪರಿಷ್ಕರಣೆ ಇಲ್ಲ. ವಲಯವಾರು ಕರೆಯಲಾಗುವ ಟೆಂಡರ್ ಪ್ರಕ್ರಿಯೆ ನಂತರ ಇಂದಿರಾ ಕ್ಯಾಂಟೀನ್ ಯೋಜನೆಗೆ ಪುನಃ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಇಂದು ಸಿಎಂ ಆಗಿ ಡಿಕೆ ಶಿವಕುಮಾರ ಪ್ರಮಾಣ ವಚನ: ಪರಮೇಶ್ವರ ಡಿಸಿಎಂ ; 13 ಶಾಸಕರಿಗೆ ಸಚಿವ ಸ್ಥಾನ ; ಪಟ್ಟಿ ಇಲ್ಲಿದೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement