ಬಿಸಿಗಾಳಿಯಿಂದಾಗಿ ಜಾರ್ಖಂಡದಲ್ಲಿ ಇಂದಿನಿಂದ 3 ದಿನಗಳ ಕಾಲ ಶಾಲೆಗಳು ಬಂದ್‌

ರಾಂಚಿ: ಜಾರ್ಖಂಡ್ ರಾಜ್ಯದಲ್ಲಿನ ಚಾಲ್ತಿಯಲ್ಲಿರುವ ಬಿಸಿಗಾಳಿ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ಜೂನ್ 12 ರಿಂದ ಮೂರು ದಿನಗಳ ಕಾಲ ಎಲ್ಲಾ ಶಾಲೆಗಳನ್ನು ಮುಚ್ಚುವುದಾಗಿ ಜಾರ್ಖಂಡ್ ಸರ್ಕಾರ ಘೋಷಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಾರ್ಯದರ್ಶಿ ಕೆ.ರವಿಕುಮಾರ ಅವರು ಹೊರಡಿಸಿರುವ ಆದೇಶದಲ್ಲಿ ರಾಜ್ಯದಲ್ಲಿನ ತೀವ್ರ ಬಿಸಿ ಮತ್ತು ಬಿಸಿಗಾಳಿಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ವರ್ಗದ ಸರ್ಕಾರಿ, ಸರ್ಕಾರೇತರ ಅನುದಾನಿತ/ ಅನುದಾನ ರಹಿತ (ಅಲ್ಪಸಂಖ್ಯಾತ ಸೇರಿದಂತೆ) ಮತ್ತು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಖಾಸಗಿ ಶಾಲೆಗಳು ಜೂನ್ 12 ರಿಂದ ಮೂರು ದಿನಗಳ ವರೆಗೆ ವರೆಗೆ ಮುಚ್ಚಲ್ಪಡುತ್ತವೆ ಎಂದು ತಿಳಿಸಲಾಗಿದೆ.
ಮುಂದಿನ ಐದು ದಿನಗಳ ಕಾಲ ಇದೇ ರೀತಿ ಇರಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ ಮತ್ತು ಜೂನ್ 15 ರವರೆಗೆ ರಾಜ್ಯದ ಕೆಲವು ಭಾಗಗಳಲ್ಲಿ ಶಾಖದ ಅಲೆಯ ಎಚ್ಚರಿಕೆಯನ್ನು ನೀಡಲಾಗಿದೆ.
ರಾಜ್ಯದಾದ್ಯಂತ ಗರಿಷ್ಠ ತಾಪಮಾನ 38-44 ಡಿಗ್ರಿ ಸೆಲ್ಸಿಯಸ್‌ ನಡುವೆ ಇದೆ.”ಮುಖ್ಯವಾಗಿ ರಾಜ್ಯದ ಪೂರ್ವ ಭಾಗದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಆದರೆ, ತಾಪಮಾನವನ್ನು ಕಡಿಮೆ ಮಾಡಲು ಇದು ಅಷ್ಟೇನೂ ಸಹಾಯ ಮಾಡುವುದಿಲ್ಲ” ಎಂದು ರಾಂಚಿ ಹವಾಮಾನ ಕೇಂದ್ರದ ಉಸ್ತುವಾರಿ ಅಭಿಷೇಕ್ ಆನಂದ್ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ದ್ವೇಷ ಭಾಷಣ : ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗ ; ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement