ಕೊಪ್ಪಳ: ಜಿಲ್ಲೆಯ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ಇಂದು, ಮಂಗಳವಾರ ಬೆಳಗಿನ ಜಾವ ಕಂಟೇನರ್ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಸಾವಿಗೀಡಾಗಿದ್ದಾರೆ.
ಮೃತರನ್ನು ಪ್ರವೀಣಕುಮಾರ ಭೋಜಪ್ಪ (27), ಸುರೇಶ ಈರಸಂಗಪ್ಪ ಹಂಡರಗಲ್ (43) ಹಾಗೂ ಗೌರಮ್ಮ ಹನುಮಗೌಡ ಕನ್ನೂರು (60) ಎಂದು ಗುರುತಿಸಲಾಗಿದೆ. ಮೃತರು ಮುದ್ದೇಬಿಹಾಳ ಮೂಲದವರು ಎನ್ನಲಾಗಿದೆ.
ಇವರು ಮದುವೆ ಮುಗಿಸಿಕೊಂಡು ವಾಪಸ್ ಊರಿಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ದಾವಣೆಗೆರೆಯಿಂದ ಮದುವೆ ಮಗಿಸಿಕೊಂಡು ಮುದ್ದೇಬಿಹಾಳಕ್ಕೆ ತೆರಳುತ್ತಿದ್ದರು. ಈ ವೇಳೆ ಕುಷ್ಟಗಿ ಬಳಿ ಎನ್ ಹೆಚ್ 50ರಲ್ಲಿ ಅಪಘಾತ ಸಂಭವಿಸಿದೆ. ನಾಯಿ ಅಡ್ಡ ಬಂದಿದ್ದರಿಂದ ಲಾರಿ ನಿಧಾನವಾಗಿತ್ತು. ಈ ವೇಳೆ ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಗುದ್ದಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಕುಷ್ಟಗಿ ಪೊಲೀಸರ ಭೇಟಿ ನೀಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ