ಬಿಬಿಎಂಪಿ ವಿಭಜನೆಗೆ ಮುಂದಾದ ಸರ್ಕಾರ: ತಜ್ಞರ ಸಮಿತಿ ರಚನೆ ಮಾಡಿ ಆದೇಶ

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯನ್ನು ವಿಭಜಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಮಹತ್ವದ ಆದೇಶದ ಹೊರಡಿಸಿದ್ದು, ಬಿಬಿಎಂಪಿ ಪುನರ್​ ರಚಿಸಲು ತಜ್ಞರ ಸಮಿತಿ ರಚನೆ ಮಾಡಿದೆ.
ಪಾಲಿಕೆಯ ಆಡಳಿತ ಹಾಗೂ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಒದಗಿಸುವ ಹಿತದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆ ಸೂಕ್ತವೆಂದು ಸರ್ಕಾರ ಪರಿಗಣಿಸಿದೆ.
ವಿಭಜಿಸುವ ಮುನ್ನ ಸಾಧಕ-ಬಾಧಕಗಳ ಬಗ್ಗೆ ವರದಿ ಪಡೆಯಲು ತಜ್ಞರ ಸಮಿತಿಯನ್ನು ನೇಮಿಸಲಾಗಿದ್ದು, ತಜ್ಞರ ಸಮಿತಿಯಿಂದ ಕಾಲಮಿತಿಯೊಳಗೆ ವರದಿ ಪಡೆದು, ವರದಿಯ ಆಧಾರದ ಮೇಲೆ ಸಾರ್ವಜನಿಕ ಸಲಹೆ ಪಡೆದು ಸೂಕ್ತ ನಿರ್ಧಾರವನ್ನು ತೆಗೆದುಕೊಂಡು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆ ಮಾಡುವ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಸರ್ಕಾರ ತಿಳಿಸಿದೆ.
ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಬಿ.ಎಸ್. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಮೂವರು ಸದಸ್ಯರನ್ನು ಒಳಗಂಡಂತೆ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಬಿ.ಎಸ್. ಪಾಟೀಲ, ಮಾಜಿ ಬಿಬಿಎಂಪಿ ಆಯುಕ್ತ ಸಿದ್ದಯ್ಯ ಹಾಗೂ ಬೆಂಗಳೂರು ಅಜೆಂಡಾ ಟಾಸ್ಕ್ ಫೋರ್ಸ್ ಸದಸ್ಯ ರವಿಚಂದರ್ ಸಮಿತಿಯಲ್ಲಿದ್ದಾರೆ. ಸಮಿತಿಗೆ ಅಗತ್ಯ ಮಾಹಿತಿ ಒದಗಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸರ್ಕಾರ ಸೂಚನೆ ನೀಡಿದೆ.

ಪ್ರಮುಖ ಸುದ್ದಿ :-   ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲೂ ತಮ್ಮ ಪಕ್ಷದಿಂದ ಸ್ಪರ್ಧೆ ; ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement