ಬೆಂಗಳೂರು: ಹೆತ್ತ ತಾಯಿಯನ್ನೇ ಕೊಂದ ಮಗಳು, ಶವವನ್ನು ಸೂಟ್ಕೇಸ್ನಲ್ಲಿಟ್ಟು ಪೊಲೀಸ್ ಠಾಣೆಗೆ ತಂದ ಆಘಾತಕಾರಿ ಘಟನೆ ಬೆಂಗಳೂರು ನಗರದ ಮೈಕೊಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಕೊಲೆಯಾದ ತಾಯಿಯನ್ನು ಬೀವಾ ಪಾಲ್ (70) ಎಂದು ಗುರುತಿಸಲಾಗಿದೆ. ಸೆನಾ ಸೇನ್ (39) ಎಂಬ ಮಹಿಳೆ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಆರೋಪ ಹೊತ್ತಿದ್ದಾಳೆ.
ಆರೋಪಿ ಸೆನಾಲಿ ಸೇನ್, ತಾಯಿ ಬೀವಾ ಪಾಲ್ ಮತ್ತು ಸೆನಾಲಿ ಅತ್ತೆ ಒಂದೇ ಮನೆಯಲ್ಲಿ ವಾಸವಿದ್ದರು. ಬೀವಾ ಪಾಲ್ ಮತ್ತು ಸೆನಾಲಿ ಅತ್ತೆ ನಡುವೆ ಪ್ರತಿನಿತ್ಯ ಜಗಳ ನಡೆಯುತ್ತಿತ್ತಂತೆ. ಜಗಳಕ್ಕೆ ಬೇಸತ್ತ ಬೀವಾ ಪಾಲ್, ನಿದ್ರೆ ಮಾತ್ರೆ ನುಂಗಿ ಸಾಯುವುದಾಗಿ ಹೇಳಿದ್ದರಂತೆ.
ಸೋಮವಾರ (ಜೂನ್ 12) ಮುಂಜಾನೆ ತಾಯಿಗೆ 20 ನಿದ್ರೆ ಮಾತ್ರೆಯನ್ನು ಸೆನಾಲಿ ನುಂಗಿಸಿದ್ದಾಳೆ. ಬಳಿಕ ವೇಲ್ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಇದಾದ ಬಳಿಕ ಟ್ರ್ಯಾಲಿ ಸೂಟ್ಕೇಸ್ನಲ್ಲಿ ತಾಯಿಯ ಶವ ಮತ್ತು ತಂದೆಯ ಫೋಟೋ ಇಟ್ಟುಕೊಂಡು ಸ್ಟೇಷನ್ಗೆ ಹೊತ್ತು ತಂದು ಪೊಲೀಸರಿಗೆ ಶರಣಾಗಿದ್ದಾಳೆ.
ಸೆನಾಲಿ ಸೇನ್ ಕೃತ್ಯಕ್ಕೆ ಪೊಲೀಸರೇ ದಂಗಾಗಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅವಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ