ಬಿಪೋರ್‌ ಜಾಯ್‌ ಚಂಡಮಾರುತ : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ

ಬೆಂಗಳೂರು: ಬಿಪೋರ್ ​​ಜಾಯ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು ಕರ್ನಾಟಕ ರಾಜ್ಯದ ಮೇಲೂ ಪರಿಣಾಮ ಬೀರಲಿದೆ. ಹೀಗಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಹೈ ಅಲರ್ಟ್​​ ಘೋಷಣೆ ಮಾಡಿದೆ.
ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಅಲೆಗಳು ಏಳುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಕರಾವಳಿ ಜಿಲ್ಲೆಗಳ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಿದ್ದು, ಪ್ರವಾಸಿಗರು, ಮಕ್ಕಳು, ಸ್ಥಳೀಯರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಸಮುದ್ರದ ಸಮೀಪ ಹೋಗುವುದನ್ನೂ ಕೂಡ ನಿಷೇಧಿಸಲಾಗಿದೆ. ಮುಂದಿನ 5 ದಿನಗಳ ಕಾಲ ಸಮುದ್ರ ಅಬ್ಬರಿಸಲಿರುವುದರಿಂದ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 42 ಕಿಮೀ ಕರಾವಳಿ ತೀರವನ್ನು ಹೊಂದಿದೆ. ಸಮುದ್ರದ ಎತ್ತರ 3 ರಿಂದ 4 ಮೀಟರ್ ಎತ್ತರದ ಅಲೆಗಳು ಉಂಟಾಗುವ ಸಾಧ್ಯತೆ ಇದ್ದು, ಜೂನ್ 19ರವರೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಚಂಡಮಾರುತದ ಹೊಡೆತಕ್ಕೆ ಕರಾವಳಿ ಭಾಗದಲ್ಲಿ ಅಲೆಗಳ ಅಬ್ಬರಕ್ಕೆ ಕಡಲತೀರ ಕೊಚ್ಚಿಹೋಗುತ್ತಿದೆ. ದಕ್ಷಿಣ ಕನ್ನಡದ ಉಳ್ಳಾಲ, ಸೋಮೇಶ್ವರ, ಬಟ್ಟಪಾಡಿಯಲ್ಲಿ ಕಡಲ್ಕೊರೆತ ಹೆಚ್ಚಾಗುತ್ತಿದೆ. ಈಗಾಗಲೇ 3ಕ್ಕೂ ಹೆಚ್ಚು ಮನೆಗಳು, ಹತ್ತಾರು ಮರಗಳು ಕುಸಿದು ಬಿದ್ದಿವೆ. ಕಾರವಾರದ ಕಡಲತೀರದಲ್ಲಿ ತಡೆಗೋಡೆಗಳು ಅಲೆಯ ಅಬ್ಬರಕ್ಕೆ ಕೊಚ್ಚಿ ಹೋಗಿದೆ.

ಇಂದಿನ ಪ್ರಮುಖ ಸುದ್ದಿ :-   ನಾಗಮಂಗಲ ಬಳಿ ಕೆಎಸ್ ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿ : ನಾಲ್ವರು ಸ್ಥಳದಲ್ಲೇ ಸಾವು

ಬಿಪೋರ್ ಜಾಯ್ ಚಂಡಮಾರುತದ ಪರಿಣಾಮ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳು ಬಿರುಗಾಳಿ, ಗುಡುಗು, ಮಿಂಚಿನ ಸಹಿತ ಮಳೆಯಾಗಲಿದ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಲೆನಾಡು ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಐದು ದಿನ ಮಳೆ ಇನ್ನು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಮುಂದಿನ 5 ದಿನಗಳ ಕಾಲ ಸಂಜೆ ವೇಳೆ ಉತ್ತಮ ಮಳೆ ಬೀಳುವ ಮುನ್ಸೂಚನೆ ನೀಡಿದೆ.
ಗುಜರಾತ್‌ನಲ್ಲಿ ಕಟ್ಟೆಚ್ಚರ
ಈಶಾನ್ಯ ಅರಬ್ಬಿ ಸಮುದ್ರದಲ್ಲಿ ಬಿಪೋರ್ ಜಾಯ್ ಚಂಡಮಾರುತ ತೀವ್ರಗೊಂಡಿದ್ದು, ಗುಜರಾತ್‌ನ ಸೌರಾಷ್ಟ್ರ ಮತ್ತು ಕಚ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಚಂಡಮಾರುತ ಪರಿಣಾಮ ಕರಾವಳಿ ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗುವ ಅಪಾಯವಿದ್ದು ಮುನ್ನೆಚ್ಚರಿಕಾ ಕ್ರಮವಾಗಿ 41,000 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಜೂನ್ 15ರಂದು ಬಿಪೋರ್ ಜಾಯ್ ಚಂಡಮಾರುತ ಗುಜರಾತ್‌ನ ಕರಾವಳಿ ಭಾಗಗಳಿಗೆ ಅಪ್ಪಳಿಸುತ್ತದೆ ಎಂದು ಅಂದಾಜು ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅಧಿಕಾರಿಗಳ ಜೊತೆ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ನಾಗಮಂಗಲ ಬಳಿ ಕೆಎಸ್ ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿ : ನಾಲ್ವರು ಸ್ಥಳದಲ್ಲೇ ಸಾವು

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement