ಸಿಇಟಿ ಫಲಿತಾಂಶ ಪ್ರಕಟ: ಬಾಲಕಿಯರದ್ದೇ ಮೇಲುಗೈ; ಈ ಲಿಂಕ್‌ ಮೂಲಕ ಫಲಿತಾಂಶ ನೋಡಿ

ಬೆಂಗಳೂರು: 2023-24ನೇ ಸಾಲಿನ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಪರೀಕ್ಷೆಯ ಫಲಿತಾಂಶ (KCET Results 2023) ಪ್ರಕಟವಾಗಿದೆ.
ಇಂದು, ಗುರುವಾರ (ಜೂನ್ 15) ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಎಂದು ಸಚಿವ ಡಾ.ಸುಧಾಕರ​ ಮಾಹಿತಿ ನೀಡಿದರು. ಪರೀಕ್ಷೆಗೆ ಹಾಜರಾಗಿದ್ದ, 2,44,345 ವಿದ್ಯಾರ್ಥಿಗಳಲ್ಲಿ ಇಂಜಿನಿಯರ್ ಕೋರ್ಸ್‌ಗೆ 2,03,381, ಕೃಷಿ ವಿಜ್ಞಾನಕ್ಕೆ 1,64,187, ಪಶುಸಂಗೋಪನೆಗೆ 1,66,756, ಯೋಗ ಮತ್ತು ನ್ಯಾಚುರೋಪತಿಗೆ 1,66,746, ಬಿ ಫಾರ್ಮ್ 2,06,191 ಹಾಗೂ ಡಿ ಫಾರ್ಮ್‌ಗೆ 2,06,340 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.
ಇಂಜಿನಿಯರಿಂಗ್ ಟಾಪರ್ಸ್
ಇಂಜಿನಿಯರಿಂಗ್ ವಿಭಾಗದಲ್ಲಿ​ ವಿಘ್ನೇಶ್​ ಟಾಪರ್‌ ಆಗಿ ಹೊರಹೊಮ್ಮಿದ್ದಾರೆ. ಅರ್ಜುನ್ ಕೃಷ್ಣಸ್ವಾಮಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ​ಸಮೃದ್ಧ​ ಶೆಟ್ಟಿ ತೃತೀಯ, ಎಸ್.ಸುಮೇಧ್​ಗೆ 4ನೇ ಸ್ಥಾನ ಹಾಗೂ ಮಾಧವ ಸೂರ್ಯ 5ನೇ ಸ್ಥಾನ ಪಡೆದುಕೊಂಡಿದ್ದಾರೆ.
ಮೊದಲ ರ್ಯಾಂಕ್ ವಿಘ್ನೇಶ ನಟರಾಜಕುಮಾರ ಇವರು ಕ್ವಾಲಿಫೈ ಪರೀಕ್ಷೆಯಲ್ಲಿ 99.667 ಅಂಕ ಹಾಗೂ ಸಿಟಿಇಯಲ್ಲಿ 96.111 ಅಂಕ ಪಡೆದಿದ್ದು, ಒಟ್ಟು 97.111 ಪರ್ಸೆಂಟೇಜ್ ಪಡೆದಿದ್ದಾರೆ.
ಬಿ-ಫಾರ್ಮ್​ ವಿಭಾಗ​
ನ್ಯಾಚೂರೋಪತಿ ಹಾಗೂ ಯೋಗದಲ್ಲಿ ಪ್ರತೀಕ್ಷಾ ಟಾಪ್ ಆಗಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಬೆಂಗಳೂರಿನ ಶ್ರೀ ಕುಮಾರನ್ ಚಿಲ್ಡ್ರನ್ ಹೋಂ ಕಾಂಪೋಸಿಟ್ ಪ್ರಿ ಯೂನಿವರ್ಸಿಟಿ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಪ್ರತೀಕ್ಷಾ, 98.661 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.
ಬೆಂಗಳೂರಿನ ಮಹೇಶ್ ಪಿಯು ಕಾಲೇಜಿನ ಮಾಳವಿಕಾ ಕಪೂರ್ ದ್ವಿತೀಯ
ಬೆಂಗಳೂರಿನ ನಾರಾಯಣ ಇ ಟೆಕ್ನೋ ಸ್ಕೂಲ್​ನ ಮಾಧವಸೂರ್ಯ ತಡೇಪಲ್ಲಿ ತೃತೀಯ

ಪ್ರಮುಖ ಸುದ್ದಿ :-   ಬೆಳಗಾವಿ| ಕಬ್ಬು ದರ ನಿಗದಿ ; ಸಿಎಂ ಸಭೆಗೂ ಮುನ್ನ ಕೈಕೈ ಮಿಲಾಯಿಸಿದ ಇಬ್ಬರು ರೈತ ನಾಯಕರ ಬೆಂಬಲಿಗರು

ಬಿಎಸ್​ಸಿ (ಕೃಷಿ) ವಿಭಾಗದಲ್ಲಿ ಬೈರೇಶ್​ಗೆ ಮೊದಲ ರ್ಯಾಂಕ್
ಅಗ್ರಿಕಲ್ಚರ್(ಕೃಷಿ ವಿಜ್ಞಾನ )ವಿಭಾಗದಲ್ಲಿ ಬೈರೇಶ್ ಎಸ್ ಎಚ್ ಮೊದಲ ರ್ಯಾಂಕ್ ಪಡೆದುಕೊಂಡಿದ್ದಾರೆ. ಮಂಗಳೂರಿ ಎಕ್ಸ್ ಪರ್ಟ್ ಯುನಿವರ್ಸಿಟಿ ಕಾಲೇಜ್ ವಿದ್ಯಾರ್ಥಿಯಾಗಿರುವ ಬೈರೇಶ್, ಕ್ವಾಲಿಫಿಕೇಷನ್​ನಲ್ಲಿ 99.75 ಅಂಕ, ಸಿಟಿಟಿಯಲ್ಲಿ 93.75 ಅಂಕ ಪಡೆದು ಮೊದಲ ರ್ಯಾಂಕ್ ಪಡೆದಿದ್ದಾರೆ.
ರಾಯಚೂರಿನ ಪ್ರಣವ ಪಿಯು ಕಾಲೇಜ್ ವಿದ್ಯಾರ್ಥಿ ಅನಯರಾಗ ರಂಜನ್ ದ್ವಿತೀಯ ಹಾಗೂ
ಕಾರ್ತಿಕ್ ಮನೋಹರ್ ತೃತೀಯ ಸ್ಥಾನ ಪಡೆದಿದ್ದಾರೆ.
ಪಶುವೈದ್ಯ ವಿಜ್ಞಾನ ವಿಭಾಗ
ಪಶುವೈದ್ಯ ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ಚಾಮರಾಜಪೇಟೆಯ ಮಹೇಶ ಪಿಯು ಕಲೇಜಿನ ವಿದ್ಯಾರ್ಥಿ ಮಾಳವಿಕ ಕಪೂರ ಮೊದಲ ರ್ಯಾಂಕ್ ಪಡೆದಿದ್ದು. ಸಿಇಟಿಯಲ್ಲಿ ಒಟ್ಟು 97.222 ಅಂಕ ಪಡೆದಿದ್ದಾರೆ.

ಫಲಿತಾಂಶ ಚೆಕ್ ಮಾಡಲು ಲಿಂಕ್ ಇಲ್ಲಿದೆ
ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಆಯುರ್ವೇದ, ಹೋಮಿಯೋಪತಿ ಮತ್ತು ಫಾರ್ಮಸಿ, ಬಿಎಸ್‌ಸಿ ನರ್ಸಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (CET 2023) ಫಲಿತಾಂಶವನ್ನು ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ಅಧಿಕೃತ ವೆಬ್‌ಸೈಟ್ http://kea.kar.nic.in/ ನಲ್ಲಿ ಬಿಡುಗಡೆ ಮಾಡಿದೆ.
ಸಿಇಟಿ ಫಲಿತಾಂಶ ಪರಿಶೀಲಿಸಲು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://kea.kar.nic.in/ ಅಥವಾ https://cetonline.karnataka.gov.in/kea/ ಗೆ ಭೇಟಿ ನೀಡಿ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 20 ಹಾಗೂ 21ರಂದು ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುಸಂಗೋಪನೆ, ಯೋಗ, ನ್ಯಾಚುರೋಪತಿ, ಡಿ ಫಾರ್ಮ ಕೋರ್ಸ್​ ಹಾಗೂ ಬಿಎಸ್ಸಿ ನರ್ಸಿಂಗ್​ಗೆ ಪ್ರವೇಶ ಪರೀಕ್ಷೆ ನಡೆಸಿತ್ತು. ಒಟ್ಟು 2,44,345 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಪ್ರಮುಖ ಸುದ್ದಿ :-   ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲೂ ತಮ್ಮ ಪಕ್ಷದಿಂದ ಸ್ಪರ್ಧೆ ; ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement