ಕಟ್ಟಡದ 2ನೇ ಅಂತಸ್ತಿನ ಕೋಚಿಂಗ್ ಸೆಂಟರ್‌ನಲ್ಲಿ ಅಗ್ನಿ ಅವಘಡ; ಕಿಟಕಿ ಮೂಲಕ ತಂತಿಯಲ್ಲಿ ಜಾರುತ್ತ ತಪ್ಪಿಸಿಕೊಂಡ ನೂರಾರು ವಿದ್ಯಾರ್ಥಿಗಳು | ವೀಕ್ಷಿಸಿ

ನವದೆಹಲಿ: ವಾಯವ್ಯ ದೆಹಲಿಯ ಮುಖರ್ಜಿ ನಗರ ಪ್ರದೇಶದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಇಂದು, ಗುರುವಾರ ಬೆಂಕಿ ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಕಿಟಕಿಗಳಿಂದ ಜಿಗಿಯುತ್ತಿರುವ ದೃಶ್ಯಾವಳಿ ಕಂಡುಬಂದಿದೆ.
ವಿಷಯ ತಿಳಿದ ಕೂಡಲೇ 11 ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಂದಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮಧ್ಯಾಹ್ನ 12:30 ಕ್ಕೆ ಬೆಂಕಿ ಕಾಣಿಸಿಕೊಂಡಿತು ಮತ್ತು ಅಗ್ನಿಶಾಮಕ ಇಲಾಖೆ ಹಂಚಿಕೊಂಡ ವೀಡಿಯೊದಲ್ಲಿ, ಸಿಕ್ಕಿ ಬಿದ್ದ ಜನರನ್ನು, ಹೆಚ್ಚಾಗಿ ವಿದ್ಯಾರ್ಥಿಗಳನ್ನು ಅಗ್ನಿಶಾಮಕ ಸಿಬ್ಬಂದಿ ಕಿಟಕಿಗಳ ಮೂಲಕ ರಕ್ಷಿಸುತ್ತಿರುವುದನ್ನು ಕಾಣಬಹುದು.

ವೈರಲ್ ಆಗಿರುವ ವಿಡಿಯೋದಲ್ಲಿ, ಶಿಕ್ಷಣ ಸಂಸ್ಥೆಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಜನರು ತಂತಿ ಬಳಸಿ ತಪ್ಪಿಸಿಕೊಳ್ಳುವುದನ್ನು ಕಾಣಬಹುದು. ತಂತಿಗಳನ್ನು ಬಳಸಿ ಕಟ್ಟಡದಿಂದ ಕೆಳಗೆ ಬರುತ್ತಿದ್ದಾಗ ನಾಲ್ವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದುವರೆಗೆ ಪ್ರಾಣಹಾನಿ ಸಂಭವಿಸಿದ ವರದಿಯಾಗಿಲ್ಲ.

ಮಧ್ಯಾಹ್ನ 12:27 ಕ್ಕೆ ಬೆಂಕಿಯ ಬಗ್ಗೆ ಕರೆ ಬಂದಿದ್ದು, ಒಟ್ಟು 11 ಅಗ್ನಿಶಾಮಕ ದಳವನ್ನು ಸೇವೆಗೆ ಕಳುಹಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ವಿದ್ಯುತ್ ಮೀಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು, ಉಪಕರಣದಿಂದ ಹೊರಹೊಮ್ಮುವ ಹೊಗೆಯಿಂದಾಗಿ ವಿದ್ಯಾರ್ಥಿಗಳು ಭಯಭೀತರಾದರು, ಬೆಂಕಿ ಆವರಿಸುತ್ತಿದ್ದಂತೆಯೇ ವಿದ್ಯಾರ್ಥಿಗಳು ಕೋಚಿಂಗ್ ಸೆಂಟರ್‌ನ ಹಿಂಭಾಗದಿಂದ ಕೆಳಗೆ ರ್ಯಾಪಲ್‌ ಮಾಡಲು ಪ್ರಾರಂಭಿಸಿದರು.

ಪ್ರಮುಖ ಸುದ್ದಿ :-   ವೀಡಿಯೊ...| ಹುಲಿ-ಕರಡಿ ಮಧ್ಯೆ "ಅಪರೂಪದ" ಮುಖಾಮುಖಿ; ಆಕ್ರಮಣಕಾರಿ ಕರಡಿಗೆ ಹುಲಿಯ ತಣ್ಣನೆಯ ಉತ್ತರ | ವೀಕ್ಷಿಸಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement